ಸಮಗ್ರ ಅಭಿವೃದ್ಧಿಯ ಬಜೆಟ್

Aanjaneya
Published on

ಚಿತ್ರದುರ್ಗ: ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ ಸಂಘ, ಶಿಕ್ಷಣ, ಆರೋಗ್ಯ ಹೀಗೆ ಎಲ್ಲ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.

ಬಡ, ಮಧ್ಯಮ ವರ್ಗದ ಜನರಿಗೆ ವರದಾನ ಆಗಿರುವ 5 ಗ್ಯಾರಂಟಿ ಯೋಜನೆಗೆ ಹಣ ಮೀಸಲಿಡುವುದು ಒಂದೆಡೆಯಾದರೆ, ಮತ್ತೊಂದೆಡೆ ವಿವಿಧ ಕ್ಷೇತ್ರಗಳಿಗೆ ಅನುದಾನ ನೀಡಿ ಅಚ್ಚರಿ ಮೂಡಿಸಿದ್ದಾರೆ. ಈ ಸವಾಲನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಡಿಸಿಸಿ ಬ್ಯಾಂಕ್, ಪಿ-ಕಾರ್ಡ್‌ಗಳಲ್ಲಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ ದಿಟ್ಟ ನಡೆ. ಜಿಲ್ಲೆಯ ಜನರ ಬಹುದಿನಗಳ ಕನಸಾಗಿದ್ದ ವೈದ್ಯಕೀಯ ಕಾಲೇಜು ಆರಂಭ ಮತ್ತು ಅಭಿವೃದ್ಧಿಗೆ 500 ಕೋಟಿ ರೂ. ಮೀಸಲಿಟ್ಟಿರುವುದು ನಿಜಕ್ಕೂ ಬಯಲುಸೀಮೆ ಜನರ ಮೇಲೆ ತಮಗಿರುವ ವಿಶೇಷ ಕಾಳಜಿಗೆ ಕಾರಣವಾಗಿದೆ. ಇದೊಂದು ಅತ್ಯುತ್ತಮ ಮತ್ತು ಜೀವಪರ ಬಜೆಟ್ ಎಂಬುದರಲ್ಲಿ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net