ಸಮತೋಲಿತ ಆಹಾರ ಸೇವಿಸಿ

3skpp 1
ಸಕಲೇಶಪುರದಲ್ಲಿ ವಿಶ್ವ ಪೌಷ್ಟಿಕಾಂಶ ದಿನ ಕಾರ್ಯಕ್ರಮವನ್ನು ಧನಲಕ್ಷ್ಮೀ ಉದ್ಘಾಟಿಸಿದರು. ಹರಿಪ್ರಸಾದ್, ಶಿವಾನಂದ್, ಸುಧೀರ್ ಇತರರು ಇದ್ದರು.
Published on

ಸಕಲೇಶಪುರ: ನಾವು ಸೇವಿಸುವ ಆಹಾರ ನಮ್ಮ ಆರೋಗ್ಯವನ್ನು ನಿರ್ಧರಿಸಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಧನಲಕ್ಷ್ಮೀ ಹೇಳಿದರು.

ಪಟ್ಟಣದ ಕ್ರಾಫರ್ಡ್ ಆಸ್ಪತ್ರೆ ಸಭಾಂಗಣದಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಪೌಷ್ಟಿಕಾಂಶ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಾನವನಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಅತ್ಯವಶ್ಯಕ. ಈ ಎರಡೂ ಆರೋಗ್ಯ ಇದ್ದಾಗ ಮಾತ್ರ ಪರಿಪೂರ್ಣ ಮಾನವನಾಗಲು ಸಾಧ್ಯ. ಆದ್ದರಿಂದ ಸಮತೋಲಿತ ಆಹಾರ ಸೇವನೆ ಅತಿಮುಖ್ಯ. ಒಂದೇ ಬಗೆಯ ಆಹಾರ ಸೇವಿಸುವುದಕ್ಕಿಂತ ವಿಭಿನ್ನ ನೈಸರ್ಗಿಕ ಆಹಾರ ಸೇವಿಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ದೇಶದಲ್ಲಿ ಇಂದಿಗೂ ಅಪೌಷ್ಟಿಕತೆ ಪ್ರಮಾಣ ಹೆಚ್ಚಿನ ಮಟ್ಟದಲ್ಲಿದೆ ಎಂಬುದು ಬೇಸರದ ವಿಷಯ. ಇದನ್ನು ಸವಾಲಾಗಿ ಸ್ವೀಕರಿಸಿರುವ ಸರ್ಕಾರ ಅಪೌಷ್ಟಿಕತೆ ನಿರ್ಮೂಲನೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸರ್ಕಾರದ ಸವಲತ್ತುಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಹೊಣೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೇಲಿದೆ ಎಂದರು.

ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಹರಿಪ್ರಸಾದ್ ಮಾತನಾಡಿ, ದೇಶದಲ್ಲಿ ಇಂದಿಗೂ ಶೇ.16ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಪ್ರಪಂಚದ 117 ದೇಶಗಳ ಹಸಿವಿನ ಪ್ರಮಾಣದ ಸೂಚ್ಯಂಕದ ಪೈಕಿ ನಮ್ಮ ದೇಶ 94 ಸ್ಥಾನದಲ್ಲಿರುವುದು ತೀವ್ರ ಕಳವಳಕಾರಿ ವಿಚಾರ. ಇದರಿಂದಾಗಿ ಕೇಂದ್ರ ಸರ್ಕಾರ ಹಸಿವು ಮುಕ್ತ ದೇಶವನ್ನಾಗಿಸಿ ರೂಪಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಿವಾನಂದ್ ಮಾತನಾಡಿ, ಹುಟ್ಟುವ ಮಗುವಿನ ಆರೋಗ್ಯ ನಿರ್ಧರಿಸುವುದು ತಾಯಿ ಸೇವಿಸುವ ಆಹಾರವನ್ನು ಅವಲಂಬಿಸಿರುತ್ತದೆ. ಹೀಗಾಗಿ ಗರ್ಭಿಣಿಯರು ಆಹಾರ ಸೇವನೆಯಲ್ಲಿ ಹೆಚ್ಚಿನ ಕಾಳಜಿ ವಹಿಸುವುದು ಅತ್ಯಗತ್ಯ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net