ಸಮಯ ಪ್ರಜ್ಞೆ, ಸೇವಾ ಮನೋಭಾವ ಬೆಳೆಸಿಕೊಳ್ಳಿ

ಬೇಲೂರು ತಾಲೂಕಿನ ಅರೇಹಳ್ಳಿ ರೋಟರಿ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾವೇಶ ಮತ್ತು ಪ್ರಾರಂಭಿಕ ತರಬೇತಿ ಶಿಬಿರದಲ್ಲಿ ಡಾ.ವೈ.ಎಸ್.ವೀರಭದ್ರಪ್ಪ, ಡಬ್ಲುೃ.ಆರ್.ಪಿಂಟೋ, ಚಿದನ್, ಎಸ್.ಬಿ.ಪಾಲಾಕ್ಷ, ಸುರೇಶ್ ಗುರೂಜಿ, ರತನ್, ಬೈರೇಗೌಡ ಇದ್ದರು.
20blrp6
Published on

ಬೇಲೂರು: ಪ್ರತಿಯೊಬ್ಬರೂ ಜೀವನದಲ್ಲಿ ಶಿಸ್ತು, ಸಮಯ ಪ್ರಜ್ಞೆ, ಸೇವಾ ಮನೋಭಾವ ಬೆಳೆಸಿಕೊಂಡು ಬದುಕಿಗೊಂದು ಅರ್ಥ ಕಲ್ಪಿಸಿ ಕೊಳ್ಳುವುದಕ್ಕೆ ಮುಂದಾಗಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಡಾ.ವೈ.ಎಸ್.ವೀರಭದ್ರಪ್ಪ ಹೇಳಿದರು.


ತಾಲೂಕಿನ ಅರೇಹಳ್ಳಿ ರೋಟರಿ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾವೇಶ ಮತ್ತು ಪ್ರಾರಂಭಿಕ ತರಬೇತಿ ಶಿಬಿರ ಉದ್ದೇಶಿಸಿ ಮಾತನಾಡಿದ ಅವರು, ಇಂದಿನ ಒತ್ತಡದ ಬದುಕಿನಲ್ಲಿಯೂ ನಮ್ಮ ಜೀವಿತಾವಧಿಯಲ್ಲಿ ಮಾಡಿದ ಒಳ್ಳೆಯ ಕೆಲಸ ಶಾಶ್ವತವಾಗಿ ಉಳಿಯುತ್ತದೆ. ಅದಕ್ಕಾಗಿ ಪ್ರತಿಯೊಬ್ಬರೂ ಶಿಸ್ತು, ಸಮಯ ಪ್ರಜ್ಞೆ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.


ಕಾಫಿ ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಅದ್ದೂರಿ ಕುಮಾರ್ ಮಾತನಾಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇಂದಿನ ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಶಿಸ್ತನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದೆ. ಜತೆಗೆ ಕಲಿಕಾರ್ಥಿಗಳಲ್ಲಿ ಸಂಸ್ಕಾರವನ್ನು ಸಹ ಕಲಿಸುತ್ತದೆ. ಆದ್ದರಿಂದ ಮಕ್ಕಳು ಇಂತಹ ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದರು.


ರೋಟರಿ ಸಂಸ್ಥೆಯ ಡಬ್ಲ್ಯು.ಆರ್.ಪಿಂಟೋ, ಚಿದನ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಬಿ. ಪಾಲಾಕ್ಷ, ಮುಖ್ಯಸ್ಥರಾದ ಸುರೇಶ್ ಗುರೂಜಿ, ಬೈರೇಗೌಡ, ರತನ್, ಎನ್.ಎಂ.ಜಯದೇವ್, ಮುಖ್ಯ ಶಿಕ್ಷಕಿ ತುಳಸಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net