

ಹೂವಿನಹಡಗಲಿ: ತಾಲೂಕಿನ ಇಟ್ಟಿಗಿ ಗ್ರಾಮದ ಬಸ್ ನಿಲ್ದಾಣದಲ್ಲಿ ಪುಸ್ತಕದ ಗೂಡನ್ನು ತಾಪಂ ಇಒ ಉಮೇಶ್ ಮೈನಹಳ್ಳಿ ಮಂಗಳವಾರ ಉದ್ಘಾಟಿಸಿದರು.
ಪ್ರಯಾಣಿಕರು ಬಸ್‌ಗಾಗಿ ಕಾಯುವಾಗ ಸಮಯ ವ್ಯರ್ಥ ಮಾಡದೆ ಪುಸ್ತಕದ ಗೂಡಿನಲ್ಲಿರುವ ಪುಸ್ತಕಗಳನ್ನು ಓದಿ ಜ್ಞಾನ ಹೆಚ್ಚಿಸಿಕೊಳ್ಳಬಹುದು. ಮೊಬೈಲ್ ಗೀಳಿನಿಂದ ಓದುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಓದಿನ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸುವ ಕೆಲಸವಾಗಬೇಕಿದೆ. ಪುಸ್ತಕಗಳ ಓದು ನಮ್ಮ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಎಂದರು.