

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಹಮ್ಮಿಕೊಂಡಿದ್ದ ಬೃಹತ್ ಕೋವಿಡ್-19 ಲಸಿಕಾ ಮೇಳ ಮತ್ತು ಜಾಗೃತಿ ಜಾಥಾಕ್ಕೆ ದೇವನಹಳ್ಳಿಯ ಮಿನಿವಿಧಾನಸೌಧದ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಹಾಗೂ ಶಾಸಕ ನಿಸರ್ಗ ನಾರಾಯಣಸ್ವಾಮಿ ಚಾಲನೆ ನೀಡಿದರು.
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಈಗಾಗಲೇ ಜಿಲ್ಲೆಯಲ್ಲಿ ಕರೊನಾ ಸೋಂಕು ನಿಯಂತ್ರಣದಲ್ಲಿದೆ. ಇದನ್ನು ಸಂಪೂರ್ಣ ತಡೆಗಟ್ಟಲು ಸಮರೋಪಾದಿಯಲ್ಲಿ ತಪಾಸಣೆ ಹಾಗೂ ಲಸಿಕೆ ಹಾಕುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.
ಲಸಿಕೆ ವಿತರಣೆಯಲ್ಲಿ ಶೇ.100 ಸಾಧನೆ ಮಾಡುವ ಗುರಿ ಹೊಂದಿ, ವಿತರಣೆ ಕಾರ್ಯವನ್ನು ಚುರುಕುಗೊಳಿಸಲಾಗಿದೆ. ಆರೋಗ್ಯ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಪುರಸಭೆ ಮತ್ತು ಗ್ರಾಪಂ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಹೇಳಿದರು.
ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್. ನಾಗೇಶ್, ಪುರಸಭೆ ಸದಸ್ಯರಾದ ಜಿ.ಎ. ರವೀಂದ್ರ, ಮುನಿಕೃಷ್ಣ, ಡಿಎಚ್‌ಒ ತಿಪ್ಪೇಸ್ವಾಮಿ, ಟಿಎಚ್‌ಒ ಡಾ. ಪಿ.ಕೆ. ಸಂಜಯ್, ಪುರಸಭೆ ಮುಖ್ಯಾಧಿಕಾರಿ ಎ.ಎಚ್. ನಾಗರಾಜ್ ಮತ್ತಿತರರು ಇದ್ದರು.
ದೇವನಹಳ್ಳಿ ತಾಲೂಕಿನಲ್ಲಿ 11 ಸಾವಿರ ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ದೇವನಹಳ್ಳಿ ಪಟ್ಟಣವೊಂದಲೇ 4 ಸಾವಿರ ಜನ ಲಸಿಕೆ ಪಡೆದುಕೊಂಡಿದ್ದಾರೆ. ಡಾ.ಸಿ.ಕೆ. ಸಂಜಯ್, ತಾಲೂಕು ವೈದ್ಯಾಧಿಕಾರಿ