

ಚಿತ್ರದುರ್ಗ: ಜಿಲ್ಲೆಯಲ್ಲಿ ರೈತರಿಗೆ ಕಳಪೆ ಗೊಬ್ಬರ ಮತ್ತು ಬೀಜಗಳನ್ನು ವಿತರಿಸುವವರ ಹಾಗೂ ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಸಮರ್ಪಕ ಗೊಬ್ಬರ ದಾಸ್ತಾನು ಜೊತೆಗೆ ಪೂರೈಸಲು ಮುಂದಾಗುವಂತೆ ಒತ್ತಾಯಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿದರು.
ಪದಾಧಿಕಾರಿಗಳಾದ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ಬಾಗೇನಾಳ್ ಎಸ್.ಆರ್.ತಿಪ್ಪೇಸ್ವಾಮಿ, ಮರ‌್ಲಹಳ್ಳಿ ರವಿಕುಮಾರ್, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಬಿ.ಆರ್.ಮಾರುತಿ, ಹನುಮಂತಪ್ಪ ಇತರರಿದ್ದರು.