

ಚಿತ್ರದುರ್ಗ: ಸಮರ್ಪಕ ಆಡಳಿತದ ಮೂಲಕ ರೈತರಿಗೆ ಉತ್ತಮ ಸೇವೆ ಒದಗಿಸಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತರಬೇತಿಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಶಿವಮೊಗ್ಗ ಹಾಲು ಒಕ್ಕೂಟ ನಿರ್ದೇ ಶಕ ಜಿ.ಬಿ.ಶೇಖರಪ್ಪ ಹೇಳಿದರು.
ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಚಿತ್ರದುರ್ಗ, ಹೊಳಲ್ಕೆರೆ ತಾಲೂಕುಗಳ ಸಹಕಾರ ಸಂಘಗಳ ಅಧ್ಯಕ್ಷರು, ಕಾರ‌್ಯನಿರ್ವಹಣಾಧಿಕಾರಿಗಳಿಗೆ ನಗರದ ಸಹಕಾರ ಭವನದಲ್ಲಿ ಗುರುವಾರ ಏ ರ್ಪಡಿಸಿದ್ದ ಒಂದು ದಿನದ ವಿಶೇಷ ತರಬೇತಿ ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಹಕಾರಿ ಸಂಸ್ಥೆಗಳಲ್ಲಿ ಕಾರ‌್ಯನಿರ್ವಹಿಸುವವರಿಗೆ ತಮ್ಮ ಕರ್ತವ್ಯ, ಪ್ರಸ್ತುತ ಕಾಯ್ದೆ, ಕಾನೂನು ಹಾಗೂ ಲೆಕ್ಕಪತ್ರ ನಿರ್ವಹಣೆ ಹೊಣೆ ಅರಿಯಲು ಇಂಥ ತರಬೇತಿಗಳಿಂದ ಅನುಕೂಲವಾಗಲಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜಿಂಕಲು ಬಸವರಾಜ್, ಸಹಕಾರ ಸಂಘಗಳ ಅಭಿವೃದ್ಧಿಗೆ ಸಂಘದ ಆಡಳಿತ ಮಂಡಳಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಶ್ರಮ ಮತ್ತು ಜವಾಬ್ದಾರಿ ಮುಖ್ಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಯೂನಿಯನ್ ಅಧ್ಯಕ್ಷ ಎಚ್.ಎಂ.ದ್ಯಾಮಣ್ಣ ಮಾತನಾಡಿದರು. ಸಹಕಾರ ಸಂಘಗಳ ಸಹಾಯಕ ನಿಬಂಧಕರ ಎಸ್.ವಿ.ಬಸವರಾಜ್ ಉಪನ್ಯಾಸ ನೀಡಿದರು.
ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಜಿ.ಇ.ಅಜ್ಜಪ್ಪ , ಮಾತೃಶ್ರೀ ಎನ್.ಮಂಜುನಾಥ್, ಕೆ.ಎಚ್.ಜಗನ್ನಾಥ್, ಡಿ.ಎಂ.ಮಹೇಶ್ವರಪ್ಪ, ಎ.ಚನ್ನಬಸಪ್ಪ, ಜಿ.ಎನ್.ಹರೀಶ್, ಹೊಳಲ್ಕೆರೆ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಭಾಗ್ಯ ಹಾಜರಿದ್ದರು.
ಜಿಲ್ಲಾ ಸಹಕಾರ ಯೂನಿಯನ್ ಮುಖ್ಯಕಾರ‌್ಯನಿರ್ವಹಣಾಧಿಕಾರಿ ಜಯಶ್ರೀ ಪಿ.ಹುನಗುಂದ ನಿರೂಪಿಸಿದರು. ಜಿಲ್ಲಾ ಸಹಕಾರ ಶಿಕ್ಷಕ ಹಾಗೂ ನಾಗರಾಜ ಪಾಟೀಲ್ ಸ್ವಾಗತಿಸಿದರು.