ಸಮರ್ಪಕ ವಿದ್ಯುತ್ ಪೂರೈಕೆಗೆ ಮನವಿ

22 HANUR 3
Published on

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ಇರುವುದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕ ಎಂ.ಆರ್.ಮಂಜುನಾಥ್, ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಲ್ಲಿ ಮನವಿ ಮಾಡಿದರು.


ವಿಧಾನಸಭೆಯ ಕಚೇರಿಯಲ್ಲಿ ಮಂಗಳವಾರ ಸಚಿವರನ್ನು ಭೇಟಿಯಾಗಿ ಮಾತನಾಡಿದ ಶಾಸಕರು, ಕ್ಷೇತ್ರ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ಇದೆ. ಹಾಗಾಗಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಇದರಿಂದ ರೈತರು ಬೆಳೆಗಳಿಗೆ ಸಮರ್ಪಕವಾಗಿ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಬೆಳೆಗಳು ಒಣಗುತ್ತಿವೆ. ಇದರಿಂದ ತೊಂದರೆ ಎದುರಿಸುತ್ತಿದ್ದಾರೆ. ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಇಲಾಖೆ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದಾರೆ. ಆದರೆ ಸಮಸ್ಯೆ ಬಗೆಹರಿದಿಲ್ಲ. ಆದ್ದರಿಂದ ಈ ಬಗ್ಗೆ ಗಮನಹರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಸೂಚಿಸಬೇಕೆಂದು ಮನವಿ ಮಾಡಿದರು.


ಈ ಬಗ್ಗೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯಿಸಿ, ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ಈ ಬಗ್ಗೆ ಸಂಬಂಧಪಟ್ಟ ಸೆಸ್ಕ್ ಅಧಿಕಾರಿಯಿಂದ ಮಾಹಿತಿ ಪಡೆದು ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net