ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ

1
Published on

ಕನಕಪುರ: ತಾಲೂಕಿನ ಕಾಂಡಂಚಿನ ಕೆರಳಾಳುಸಂದ್ರ ಗ್ರಾಮಕ್ಕೆ ಸಮಪರ್ಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಈ ಸಮಸ್ಯೆಯನ್ನು ತಕ್ಷಣವೇ ಪರಿಹರಿಸುವಂತೆ ಒತ್ತಾಯಿಸಿ ಗ್ರಾಮದ ರೈತರು ಬೆಸ್ಕಾಂ ಕಚೇರಿ ಎದುರು ಸೋಮವಾರ ಪ್ರತಿಭಟಿಸಿದರು. ಬಳಿಕ ಇಲಾಖೆಯ ಅಧಿಕಾರಿಗಳಿಗೆ ಮನವಿಪತ್ರ ಸಲ್ಲಸಿದರು.

ರೇಷ್ಮೆ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಡಿ.ಕೆ. ರಾಮಕೃಷ್ಣ ಮಾತನಾಡಿ, ಕೆರಳಾಳುಸಂದ್ರಕ್ಕೆ ಹಗಲು ಮತ್ತು ರಾತ್ರಿ ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇದರಿಂದ ಕೃಷಿ ಚಟುವಟಿಕೆಗಳು ವಿಳಂಬವಾಗುತ್ತಿವೆ ಎಂದು ಆರೋಪಿಸಿದರು.

ರಾತ್ರಿಯ ವೇಳೆ ಹೆಚ್ಚಿನ ವಿದ್ಯುತ್ ಪೂರೈಕೆ ಮಾಡುವುದರಿಂದ, ರೈತರ ಪಂಪ್‌ಸೆಟ್‌ಗಳು ಪದೇಪದೇ ದುರಸ್ತಿಗೆ ಬರುತ್ತಿವೆ. ಅನಗತ್ಯವಾಗಿ ಸಾವಿರಾರು ರೂಪಾಯಿ ಖರ್ಚಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನಹರಿಸಬೇಕು. ಹಗಲು ವೇಳೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು. ಇಲ್ಲವಾದರೆ, ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬರಡನಹಳ್ಳಿ ಸೊಸೈಟಿ ಅಧ್ಯಕ್ಷ ಕೆ.ಎಚ್. ಗಿರೀಶ್, ಕೆರಳಾಳುಸಂದ್ರ ಕರಿಯಪ್ಪ, ಸುರೇಶ್, ಮಹದೇವು, ಆನಂದ್, ಸತೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net