ಸಮವಸ್ತ್ರ ವಿತರಿಸಿ ಜನ್ಮದಿನ ಆಚರಣೆ

Basavamantap Dress Distribution Photo (sidramayya Swamy Birthday)
Published on

ಬೀದರ್: ಸಿದ್ರಾಮಯ್ಯ ಸ್ವಾಮಿ ಸ್ನೇಹಿತರ ಬಳಗದ ವತಿಯಿಂದ ಬಡ ಹಾಗೂ ಅನಾಥ ಮಕ್ಕಳಿಗೆ ಸಮವಸ್ತ್ರ ವಿತರಿಸುವ ಮೂಲಕ ನಗರದಲ್ಲಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಯ್ಯ ಸ್ವಾಮಿ ಅವರ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಲಾಯಿತು.
ನಗರದ ಬಸವ ಮಂಟಪದಲ್ಲಿ ಬಡ ಹಾಗೂ ಅನಾಥ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಯಿತು.
ಸಿದ್ರಾಮಯ್ಯ ಸ್ವಾಮಿ ಅವರು ಸಾಮಾಜಿಕ, ಧಾರ್ಮಿಕ, ಕೃಷಿ ಸೇರಿದಂತೆ ಜಿಲ್ಲೆಯ ವಿವಿಧ ಕ್ಷೇತ್ರಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಚಟುವಟಿಕೆ ಮೂಲಕ ಅವರ ಜನ್ಮದಿನ ಆಚರಿಸಿರುವುದು ಶ್ಲಾಘನೀಯ ಎಂದು ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಹೇಳಿದರು.
ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಬಸವ ಮಂಟಪದ ಮಾತೆ ಸತ್ಯದೇವಿ, ಹೈದರಾಬಾದ್‍ನ ಅನಿಮಿಸನಂದಾ ಸ್ವಾಮೀಜಿ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಕಾರ್ಯದರ್ಶಿ ಸಂಗಶೆಟ್ಟಿ ಹಲಬುರ್ಗೆ, ರಾಷ್ಟ್ರೀಯ ಬಸವ ದಳದ ಬೀದರ್ ದಕ್ಷಿಣ ಕ್ಷೇತ್ರ ಉಸ್ತುವಾರಿ ಮಹಾಲಿಂಗ ಸ್ವಾಮಿ ಚಟ್ನಳ್ಳಿ, ಪ್ರಮುಖರಾದ ಶರಣಯ್ಯ ಸ್ವಾಮಿ, ರೇವಪ್ಪ ರೆಡ್ಡಿ, ಗೋವಿಂದ ರೆಡ್ಡಿ, ಆಕಾಶ ಪಾಟೀಲ ಚಿಮಕೋಡ್, ಮಲ್ಲಿಕಾರ್ಜುನ ಮಡಿವಾಳ, ಸುದರ್ಶನ್ ಪಾಲ್ ಮೊದಲಾದವರು ಇದ್ದರು.
ನಂತರ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಂಪಲು ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net