

ಯಾದಗಿರಿ: ಗ್ರಾಮೀಣ ಭಾಗದ ಸಮಸ್ಯೆಗಳ ಪರಿಹಾರಕ್ಕೆ ನಾನು ಕಟಿಬದ್ಧನಾಗಿದ್ದು, ಯಾವುದೇ ತೊಂದರೆ ಇದ್ದರೂ ಜನತೆ ನೇರವಾಗಿ ತಮ್ಮನ್ನು ಕಾಣುವಂತೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಸಲಹೆ ನೀಡಿದರು.
ಸೋಮವಾರ ಮತಕ್ಷೇತ್ರದ ಮುಂಡರಗಿ, ಅಶೋಕ ನಗರ, ಅರಿಕೇರಾ (ಕೆ), ರಾಮಸಮುದ್ರ ಗ್ರಾಮಗಳಲ್ಲಿ ಆಯೋಜಿಸಿದ್ದ ಶಾಸಕರ ನಡೆ, ಹಳ್ಳಿಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಚುನಾವಣೆಯಲ್ಲಿ ಜನತೆ ನನಗೆ ಆಶಿವರ್ಾದ ಮಾಡಿ ವಿಧಾನಸಭೆಗೆ ಕಳಿಸಿದ್ದಾರೆ. ಅವರ ಋಣ ತೀರಿಸುವುದು ನನ್ನ ಕರ್ತವ್ಯ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸಕರ್ಾರ ಬಹುಮತದೊಂದಿಗೆ ಅಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಬಡ ಮತ್ತು ಮಧ್ಯಮ ವರ್ಗಗಳ ಕಲ್ಯಾಣಕ್ಕಾಗಿ 5 ಗ್ಯಾಂರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತಿದ್ದಾರೆ. ಈಗಾಗಲೇ ಶಕ್ತಿ, ಗೃಹಲಕ್ಷ್ಮೀ ಗೃಹಜ್ಯೋತಿ ಯೋಜನೆಗಳು ಸಮರ್ಪಕವಾಗಿ ಜಾರಿಗೊಂಡಿದ್ದು ನಾಡಿನ ಜನರ ಮನೆಮಾತಾಗಿವೆ. ಮುಂದಿನ ದಿನಗಳಲ್ಲಿ ಜನರ ಕಲ್ಯಾಣಕ್ಕಾಗಿ ನಮ್ಮ ಸಕರ್ಾರ ಶ್ರಮಿಸಲಿದೆ ಎಂದು ಹೇಳಿದರು.
ಕಾಂಗ್ರೆಸ್ ಎಂದಿಗೂ ನುಡಿದಂತೆ ನಡೆಯುವ ಪಕ್ಷವಾಗಿದೆ. ಬಡ ಜನರ ಆಶೋತ್ತರ ಈಡೇರಿಸುವುದು ನಮ್ಮ ಪ್ರಮುಖ ಗುರಿಯಾಗಿದೆ. ಹೀಗಾಗಿ ಮತಕ್ಷೇತ್ರದ ಪ್ರತಿ ಗ್ರಾಮಗಳಿಗೂ ನಾನೇ ಖುದ್ದಾಗಿ ಭೇಟಿ ನೀಡಿ, ಜನರ ಸಮಸ್ಯೆ ಅರಿಯಲು ನಮ್ಮ ನಡೆ ಹಳ್ಳಿ ಕಡೆ ಕಾರ್ಯಕ್ರಮ ಹಾಕಿಕೊಂಡಿದ್ದೇನೆ. ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರು, ಸ್ಗಚ್ಛತೆ, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಲಭ್ಯ ಕಲ್ಪಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಅಕಾರಿಗಳು ಸಹ ಕಾಲಕಾಲಕ್ಕೆ ಜನರ ಸಮಸ್ಯೆ ಅರಿತುಕೊಳ್ಳಲು ಪ್ರಯತ್ನಿಸಬೇಕು ಎಂದು ನಿದರ್ೇಶಿಸಿದರು.
ತಾಪಂ ಇಒ ಬಸವರಾಜ ಶರಬೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದರ್ಶನ ನಾಯಕ ಹಾಗೂ ವಿವಿಧ ಇಲಾಖೆ ಅಕಾರಿಗಳು ಇದ್ದರು.