ಸಮಸ್ಯೆಗಳ ಪರಿಹಾರಕ್ಕೆ ಸಮೀಕ್ಷಾ ಕಾರ್ಯ ತ್ವರಿತಗೊಳಿಸಿ

mdl-30-3
ಮುಧೋಳ ತಾಲೂಕಾ ಆಡಳಿತ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮೀಕ್ಷಾ ಕಾರ್ಯದಲ್ಲಿ ಎದುರಾಗುತ್ತಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ತೊಡಕುಗಳ ನಿವಾರಣೆ ಸಭೆಯಲ್ಲಿ ಸಮೀಕ್ಷೆ ಪೂರ್ಣಗೊಳಿಸಿದ ಗಣತಿದಾರರನ್ನು ಸನ್ಮಾನಿಸಲಾಯಿತು.
Published on

ಬಾಗಲಕೋಟೆ: ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ತ್ವರಿತಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅಽಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ತಾಲೂಕಾ ಆಡಳಿತ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮೀಕ್ಷಾ ಕಾರ್ಯದಲ್ಲಿ ಎದುರಾಗುತ್ತಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ತೊಡಕುಗಳ ನಿವಾರಣೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಽಕಾರಿ ಜಿ.ಪಂ ಸಿಇಒ ಜಿಲ್ಲಾ ಮಟ್ಟದ ಅಽಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ವಿಳಂಬಕ್ಕೆ ಕಾರಣವಾಗುತ್ತಿರುವ ಎಲ್ಲಾ ಗೊಂದಲಗಳನ್ನು ಆದ್ಯತೆ ಮೇಲೆ ಪರಿಹರಿಸುವಂತೆ ನಿರ್ದೇಶನ ನೀಡಿದರು. ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಈ ಸಮೀಕ್ಷೆ ರಾಜ್ಯದ ಕಲ್ಯಾಣ ಯೋಜನೆಗಳನ್ನು ರೂಪಿಸಲು ಅತ್ಯಗತ್ಯವಾಗಿದೆ. ಆದ್ದರಿಂದ, ಯಾವುದೇ ಕಾರಣಕ್ಕೂ ಸಮೀಕ್ಷೆ ನಿಗದಿತ ಅವಽಯಲ್ಲಿ ಪೂರ್ಣಗೊಳ್ಳಬೇಕು ಎಂದು ಹೇಳಿದರು.

ಮೊಬೈಲ್ ಅಪ್ಲಿಕೇಶನ್‌ನಲ್ಲಿ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗಳು, ಸಮೀಕ್ಷಾರ್ಥಿಗಳಿಗೆ ಅಗತ್ಯ ಮಾಹಿತಿ ಮತ್ತು ತರಬೇತಿಯ ಕೊರತೆ, ಹಾಗೂ ಕೆಲವು ಪ್ರದೇಶಗಳಲ್ಲಿ ಜನರು ಸಮರ್ಪಕವಾಗಿ ಸಹಕರಿಸದಿರಿಸಬೇಕು. ತಾಂತ್ರಿಕ ತಂಡಗಳನ್ನು ಬಲಪಡಿಸಿ ಆ್ಯ-ï ಸಮಸ್ಯೆಗಳನ್ನು ಕೂಡಲೇ ಬಗೆಹರಿಸಲು ಮತ್ತು ಸಮೀಕ್ಷಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಸಚಿವರು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಽಕಾರಗಳಿಗೆ ಸೂಚನೆ ನೀಡಿದರು.

ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಜಿಲ್ಲಾಽಕಾರಿ ಸಂಗಪ್ಪ ಅವರು ಸಮೀಕ್ಷೆಯ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಸಮಗ್ರ ವಿವರಣೆ ನೀಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಽಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್, ಜಮಖಂಡಿ ಉಪ ವಿಭಾಗ ಅಽಕಾರಿ ಶ್ವೇತಾ ಬಿಡಿಕರ ಮತ್ತು ತಹಸೀಲ್ದಾರ ಪ್ರಕಾಶ ಗಾಯಕವಾಡ ಸೇರಿದಂತೆ ಇತರರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net