ಸಮಸ್ಯೆಗಳಿದ್ದರೆ ನಿರ್ಭೀತಿಯಿಂದ ದೂರು ನೀಡಿ

14arsph1ep
ಲೋಕಾಯುಕ್ತ ಡಿವೈಎಸ್‌ಪಿ ಮಲ್ಲಿಕಾ ಅವರು ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸಿದರು. ವಿಭಾ ವಿ.ರಾಥೋಡ್, ಪಾಲಾಕ್ಷ, ನಾಗರಾಜ್, ಕೇಶವ ಚೌಗುಲೆ ಇತರರಿದ್ದರು.
Published on

ಅರಸೀಕೆರೆ : ಸಾರ್ವಜನಿಕರು ತಮಗೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ನಿರ್ಭೀತಿಯಿಂದ ದೂರು ನೀಡಬಹುದಾಗಿದೆ ಎಂದು ಲೋಕಾಯುಕ್ತ ಡಿವೈಎಸ್‌ಪಿ ಮಲ್ಲಿಕಾ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ನಾಗರಿಕರೊಂದಿಗೆ ಮಾತನಾಡಿದರು. ಸರ್ಕಾರದ ಸವಲತ್ತುಗಳನ್ನು ತಲುಪಿಸುವ ಹೊಣೆಗಾರಿಕೆ ಅಧಿಕಾರಿಗಳ ಮೇಲಿದೆ ಎಂಬುದನ್ನು ಮರೆಯಬಾರದು. ಇಂತಹ ಸನ್ನಿವೇಶದಲ್ಲಿ ಫಲಾನುಭವಿಗಳಿಗೆ ತೊಂದರೆ ಎದುರಾದಲ್ಲಿ ದೂರು ನೀಡಿದಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ತಹಸೀಲ್ದಾರ್ ವಿಭಾ ವಿ.ರಾಥೋಡ್, ಲೋಕಾಯುಕ್ತ ಇನ್ಸ್‌ಪೆಕ್ಟರ್ ಬಾಲು, ಉಪತಹಸೀಲ್ದಾರ್ ಪಾಲಾಕ್ಷ, ತಾಪಂ ಇಒ ನಾಗರಾಜ್, ಪೌರಾಯುಕ್ತ ಕೇಶವ ಚೌಗುಲೆ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪಹಣಿ, ಖಾತೆ ಬದಲಾವಣೆ, ಇ-ಸ್ವತ್ತು ವಿಳಂಬ, ಒಳಚರಂಡಿ ತ್ಯಾಜ್ಯ ತೆರವು ನಿರ್ಲಕ್ಷ್ಯ, ಸೇರಿದಂತೆ ಅನೇಕ ಸಮಸ್ಯೆಗಳನ್ನು ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳ ಮುಂದೆ ತೆರೆದಿಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net