ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖ

11ATHANI2
Published on

ಅಥಣಿ: ಪ್ರತಿಯೊಬ್ಬರು ಗುರುಗಳಿಗೆ ಗೌರವ ನೀಡುವ ಮೂಲಕ ಅವರನ್ನು ಪೂಜ್ಯಭಾವದಿಂದ ಕಾಣಬೇಕು ಎಂದು ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಶಂಕರ ಹಂಜಿ ಹೇಳಿದರು.

ಪಟ್ಟಣದ ಶಂಕರನಗರದಲ್ಲಿರುವ ವಿದ್ಯಾವರ್ಧಕ ಶಾಲೆಯಲ್ಲಿ ಗುರುಪೂರ್ಣಿಮೆ ಅಂಗವಾಗಿ ಈಚೆಗೆ ಹಮ್ಮಿಕೊಂಡಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಜ್ಞಾನ ನೀಡುವುದರ ಜತೆಗೆ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಅಮೂಲ್ಯವಾಗಿದೆ ಎಂದರು.

ಸಂಸ್ಥೆಯ ಉಪಾಧ್ಯಕ್ಷ ಪ್ರಕಾಶ ಮಹಾಜನ, ಸೈಬಣ್ಣ ಕಮತಗಿ ಮಾತನಾಡಿದರು.ವಿದ್ಯಾರ್ಥಿಗಳು ಶಿಕ್ಷಕರ ಪಾದಪೂಜೆ ನೆರವೇರಿಸಿ ಕೃತಜ್ಞತೆ ಅರ್ಪಿಸಿದರು. ಶಾಲೆಯ ಎಲ್ಲ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net