ಸಮಾಜಕ್ಕೆ ದಾರಿದೀಪ ಸವಿತಾ ಮಹರ್ಷಿ

5kuudligi1
Published on

ಕೂಡ್ಲಿಗಿ: ಸವಿತಾ ಮಹರ್ಷಿ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹನೀಯರಾಗಿದ್ದಾರೆ ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ ಹೇಳಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಸವಿತಾ ಸಮಾಜದ ವತಿಯಿಂದ ಏರ್ಪಡಿಸಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು. ಸವಿತಾ ಮಹರ್ಷಿಗಳು ಸಮಾಜಕ್ಕೆ ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಸರ್ಕಾರ ಆದರ್ಶಗಳ ಹಾದಿಯಲ್ಲಿ ನಡೆಯಲು ನಮಗೆ ಬೆಳಕು ತೋರಿಸಿದೆ. 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣ ಅವರಿಗೆ ಆಶ್ರಯ ನೀಡಿದ್ದ ದೊರೆ ಸವಿತಾ ಸಮಾಜದ ಬಿಜ್ಜಳ ಎಂಬುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net