ಸಮಾಜಮುಖಿ ಕಾರ್ಯಕ್ರಮಕ್ಕೆ ಆದ್ಯತೆ

ಸಮಾಜಮುಖಿ ಕಾರ್ಯಕ್ರಮಕ್ಕೆ ಆದ್ಯತೆ
Published on

ಹಾಸನ: ಜಿಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ನಿಗಮ ಮಂಡಳಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ನಿವೇಶನ ಪಡೆದ ಸದಸ್ಯರ ಸಮಾಗಮ ಕಾರ್ಯಕ್ರಮ ಇತ್ತೀಚೆಗೆ ನಗರದ ಎಂ.ಜಿ.ರಸ್ತೆಯಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಎಂ.ಶ್ರೀನಿವಾಸ್, ಸಂಘವು ಸಾಮಾನ್ಯ ಸರ್ಕಾರಿ ನೌಕರರು ಹಾಗೂ ನಾಗರಿಕರ ಹಿತಾಸಕ್ತಿಗಾಗಿ ಶ್ರಮಿಸುತ್ತಿದೆ. ಸದಸ್ಯರ ಹಣಕಾಸಿನ ಪರಿಸ್ಥಿತಿಗೆ ಅನುಗುಣವಾಗಿ ಸುದೀರ್ಘ ಅವಧಿಯ ಕಂತು ಪದ್ಧತಿ ಮೂಲಕ ನಿವೇಶನ ಹಂಚುವ ಯೋಜನೆಯನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯ ಶಿವಕುಮಾರ್, ಸಂಘವು ಪಾರದರ್ಶಕವಾಗಿ ಕೆಲಸಮಾಡುತ್ತಿದೆ. ಮುಂದಿನ ದಿನಗಳಲ್ಲಿ ನೌಕರರ ಹಿತದೃಷ್ಟಿಯಿಂದ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಸರ್ಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷ ಎಂ.ಎನ್. ಪರಮೇಶ್, ಉಪಾಧ್ಯಕ್ಷ ಬಿ.ಆರ್.ಧರ್ಮ, ರಾಜಶೇಖರಪ್ಪ, ಸತೀಶ್, ರಾಜ್ಯ ಪರಿಷತ್ ಸದಸ್ಯ ರಾಜು, ಕಾಳೇಗೌಡ, ವರದರಾಜ್, ಸುರೇಶ್ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net