ಸಮಾಜಮುಖಿ ಕೆಲಸಗಳಿಂದ ಇತರರಿಗೆ ಮಾದರಿ

19M.D.R.3
Published on

ಮದ್ದೂರು: ಪಟ್ಟಣದ ಕೆ. ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯ ರೋಗಿಗಳ ಅನುಕೂಲಕ್ಕಾಗಿ ಎಂ.ಅಕ್ಷಯ್ ಗೌಡ ಅವರು ತಮ್ಮ ತಾಯಿಯ ಹೆಸರಿನಲ್ಲಿ 2 ಲಕ್ಷ ರೂ.ನಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಕೆ.ಎಂ. ಉದಯ್ ಮಂಗಳವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಸಾರ್ವಜನಿಕ ಆಸ್ಪತ್ರೆಗೆ ಅನಾರೋಗ್ಯದಿಂದ ದಾಖಲಾಗುವ ರೋಗಿಗಳು ಅವರು ಸಂಬಂಧಿಕರಿಗೆ ಕುಡಿಯುವ ನೀರಿನ ಅವಶ್ಯಕತೆ ಇದ್ದು, ಈ ವೇಳೆ ಶುದ್ಧ ಕುಡಿಯುವ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಇತ್ತು. ಅದನ್ನು ಹೋಗಲಾಡಿಸುವ ದೃಷ್ಟಿಯಿಂದ ಅಕ್ಷಯ್‌ಗೌಡ ಅವರು ಅವರ ತಾಯಿ ಅನಿತಾ ಮಹೇಶ್ ಚಂದ್ ಹೆಸರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪನೆ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಇಂತಹ ಸಮಾಜಮುಖಿ ಕೆಲಸಗಳನ್ನು ಮಾಡಿದರೆ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮದ್ದೂರು ಆಸ್ಪತ್ರೆಯಲ್ಲಿ ವೈದ್ಯರು ಕೊರತೆ ಇರುವ ಬಗ್ಗೆ ನನ್ನ ಗಮನಕ್ಕೆ ಬಂದಿದ್ದು, ನಾನು ಈಗಾಗಲೇ ಸಂಬಂಧಿಸಿದ ಸಚಿವರು ಮನವಿ ಮಾಡಿ ಹೆಚ್ಚಿನ ಸಿಬ್ಬಂದಿ ಒದಗಿಸುವಂತೆ ಮನವಿ ಮಾಡಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಸ್ವಾತಂತ್ರೃ ಹೋರಾಟಗಾರ ಕೆ.ಟಿ. ಚಂದು, ಅಪೂರ್ವ ಚಂದು, ಸ್ವರೂಪ್ ಚಂದ್, ಡಾ.ಬಾಲಕೃಷ್ಣ, ಡಾ.ರವೀಂದ್ರ, ಮುಖಂಡರಾದ ಮಹಾಲಿಂಗಯ್ಯ, ನಾಗೇಶ, ಸುಧಾಕರ, ಕದಲೂರು ಕೆಎಂ ರವಿಕುಮಾರ್, ದಿನೇಶ್ ಬಾಬು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net