ಸಮಾಜಮುಖಿ ಚಿಂತನೆಯೊಂದಿಗೆ ಕ್ರಿಯಾಶೀಲ ವ್ಯಕ್ತಿತ್ವ ರೂಪಿಸಿಕೊಳ್ಳಿ

18arsph1ep
ಅರಸೀಕೆರೆಯ ಶ್ರೀ ವೆಂಕಟೇಶ್ವರ ಕಲಾಭವನದಲ್ಲಿ ಆಯೋಜಿಸಿದ್ದ ಮಾಧ್ಯಮ ದಿನಾಚರಣೆಯನ್ನು ಜಿವಿಟಿ ಬಸವರಾಜ್ ಉದ್ಘಾಟಿಸಿದರು. ಬಾಳ್ಳುಗೋಪಾಲ್, ಕಾಟೀಕೆರೆ ಪ್ರಸನ್ನಕುಮಾರ್, ರವಿ ನಾಕಲಗೂಡು, ನಂಜುಂಡೇಗೌಡ, ವೇಣುಕುಮಾರ್, ಪಿ.ಶಾಂತಕುಮಾರ್ ಇದ್ದರು.
Published on


*ಪತ್ರಕರ್ತರಿಗೆ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಜಿವಿಟಿ ಬಸವರಾಜ್ ಸಲಹೆ


ಅರಸೀಕೆರೆ: ಪತ್ರಕರ್ತರು ಸಮಾಜಮುಖಿ ಚಿಂತನೆಯೊಂದಿಗೆ ಕ್ರಿಯಾಶೀಲ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಜಿವಿಟಿ ಬಸವರಾಜ್ ಹೇಳಿದರು.


ನಗರದ ಶ್ರೀ ವೆಂಕಟೇಶ್ವರ ಕಲಾಭವನದಲ್ಲಿ ಶನಿವಾರ ಆಯೋಜಿಸಿದ್ದ ಮಾಧ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ದೃಶ್ಯಮಾಧ್ಯಮಗಳಿಂದಾಗಿ ಮುದ್ರಣ ಮಾಧ್ಯಮದಲ್ಲಿ ಕೆಲಸ ಮಾಡುವುದು ಸವಾಲಿನ ಕೆಸಲವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಪ್ರಚಲಿತ ವಿದ್ಯಮಾನಗಳ ಅರಿವಿನ ಜತೆಗೆ ಸಮಾಜಮುಖಿ ವಿಚಾರ ಧಾರೆಗಳನ್ನು ಜನರಿಗೆ ತಲುಪಿಸುವ ಕಾರ್ಯ ನಡೆಯಬೇಕಿದೆ ಎಂದರು.


ಸಂಘದ ಪದಾಧಿಕಾರಿಗಳು ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸಿಕೊಂಡು ಸವಾಲಿನ ಸಮಸ್ಯೆಗಳಿಗೆ ತಮ್ಮನ್ನು ತೆರೆದುಕೊಂಡಲ್ಲಿ ಸೇವೆಗೆ ಮಹತ್ವ ಬರಲಿದೆ ಎಂದು ಹೇಳಿದರು.


ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಳ್ಳುಗೋಪಾಲ್ ಮಾತನಾಡಿ, ಮಾಧ್ಯಮ ದಿನಾಚರಣೆ ಆಯೋಜಿಸಿ ರಾಜಕಾರಣಿಗಳಿಂದ ಬುದ್ದಿ ಹೇಳಿಸಿಕೊಳ್ಳುವ ಸ್ಥಿತಿಗೆ ಬಂದಿರುವುದು ನೋವಿನ ಸಂಗತಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ನಾಲ್ಕನೇ ಅಂಗ ಎನ್ನುವ ಹೇಳಿಕೆ ಹಾಸ್ಯಾಸ್ಪದ ಸಂಗತಿ ಎಂದು ಮಾತಿನ ಚಾಟಿ ಬೀಸಿದರು.


ಗಂಡಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಟ್ರೋಬಾಬು ಮಾತನಾಡಿ, ಕೆಲ ದೃಶ್ಯ ಮಾಧ್ಯಮಗಳು ಸುದ್ದಿ ವೈಭವೀಕರಣದ ಪೈಪೋಟಿಗೆ ಬಿದ್ದಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ಆತುರದಲ್ಲಿ ಬ್ರೇಕಿಂಗ್ ನೀಡುವುದು, ರಾಜಕೀಯ ಪಕ್ಷಗಳ ವಕ್ತಾರರಂತೆ ಬಿಂಬಿಸಿಕೊಳ್ಳುವುದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗಲಿದೆ. ಹಾಗಾಗಿ ಈ ಬಗ್ಗೆ ಎಚ್ಚರ ವಹಿಸುವ ಅಗತ್ಯವಿದೆ ಎಂದರು.


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಹ್ವಾನಿತ ಸದಸ್ಯ ರವಿ ನಾಕಲಗೂಡು, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕಾಟೀಕೆರೆ ಪ್ರಸನ್ನಕುಮಾರ್ ಮಾತನಾಡಿದರು. ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ನಂಜುಂಡೇಗೌಡ, ವೇಣುಕುಮಾರ್, ತಾಲೂಕು ಸಂಘದ ಅಧ್ಯಕ್ಷ ಪಿ.ಶಾಂತಕುಮಾರ್ ವೇದಿಕೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net