ಸಮಾಜಮುಖಿ ಬೆಳವಣಿಗೆ ಬಹುಮುಖ್ಯ

10 smg 6
ಅಂಬೇಡ್ಕರ್ ಭವನದಲ್ಲಿ ಮಾನಸ ಟ್ರಸ್ಟ್‌ನ ಕಟೀಲ ಅಶೋಕ್ ಪೈ ಸ್ಮಾರಕ ಸಮೂಹ ಸಂಸ್ಥೆಗಳ ವಾರ್ಷಿಕೋತ್ಸವವನ್ನು ಎನ್.ರಮೇಶ್ ಉದ್ಘಾಟಿಸಿದರು. ಡಾ. ಸಂಧ್ಯಾ ಕಾವೇರಿ, ಡಾ. ರಜನಿ ಎ ಪೈ, ಡಾ. ರಾಜೇಂದ್ರ ಚೆನ್ನಿ ಇತರರಿದ್ದರು.
Published on

ಶಿವಮೊಗ್ಗ: ವಿದ್ಯಾರ್ಥಿಗಳು ಯಾವುದೇ ವೃತ್ತಿ ಆಯ್ಕೆ ಮಾಡಿಕೊಂಡರೂ ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು ಎಂದು ಆರ್ಯ ಪಿಯು ಕಾಲೇಜಿನ ನಿರ್ದೇಶಕ ಎನ್.ರಮೇಶ್ ಹೇಳಿದರು.

ಅಂಬೇಡ್ಕರ್ ಭವನದಲ್ಲಿ ಶನಿವಾರ ಮಾನಸ ಟ್ರಸ್ಟ್‌ನ ಕಟೀಲ ಅಶೋಕ್ ಪೈ ಸ್ಮಾರಕ ಸಮೂಹ ಸಂಸ್ಥೆಗಳ ವಾರ್ಷಿಕೋತ್ಸವ ಹಾಗೂ ಸಮಾರೋಪದಲ್ಲಿ ಮಾತನಾಡಿದ ಅವರು, ಮಾನಸ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳನ್ನು ಸಮಾಜಮುಖಿಯಾಗಿ ರೂಪಿಸುತ್ತಿದೆ. ಅದನ್ನು ವಿದ್ಯಾರ್ಥಿಗಳು ಅರಿತು ಭವಿಷ್ಯದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಬೇಕಾಗುತ್ತದೆ ಎಂದರು.

ಎಸ್‌ಎಸ್‌ಎಲ್‌ಸಿಯಲ್ಲಿ 625 ಅಂಕ ಪಡೆದ ಆದಿಚುಂಚನಗಿರಿ ಪ್ರೌಢಶಾಲೆಯ ಎನ್.ಸಹಿಷ್ಣು, ರಾಮಕೃಷ್ಣ ವಿದ್ಯಾಸಂಸ್ಥೆಯ ನಿತ್ಯಾ ಕುಲಕರ್ಣಿ, ಪ್ರಿರ್ಯದರ್ಶಿನಿ ವಿದ್ಯಾಸಂಸ್ಥೆಯ ನಮನಾ ಹಾಗೂ ಪ್ರಾಚಾರ್ಯರಾದ ದಿವ್ಯಾ, ತೀರ್ಥೆಶ್ ಮತ್ತು ಸುನಿತಾ ದೇವಿ ಅವರನ್ನು ಸನ್ಮಾನಿಸಲಾಯಿತು.

ರಾಜ್ಯಮಟ್ಟದ ರ‌್ಯಾಂಕ್ ಪಡೆದ ಕಟೀಲ್ ಅಶೋಕ್ ಪೈ ಸ್ಮಾರಕ ಪೂರಕ ಆರೋಗ್ಯ ಸಂಸ್ಥೆಯ ವಿದ್ಯಾರ್ಥಿನಿಯರಾದ ಮಯೂರಿ ಮೇಟಿ, ಸಂಧಿಯಾ, ನಸುರೀನ್, ಹರ್ಷಿತಾ ಹಾಗೂ ರಾಜಲಕ್ಷ್ಮೀ ಅವರನ್ನು ಅಭಿನಂದಿಸಲಾಯಿತು. ಸಮಾರೋಪದಲ್ಲಿ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಪಠ್ಯೇತರ ಚಟುವಟಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಮತ್ತು ಕ್ರೀಡಾ ಚಟುವಟಿಕೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಪ್ರಾಚಾರ್ಯೆ ಡಾ. ಸಂಧ್ಯಾ ಕಾವೇರಿ ಮಾತನಾಡಿದರು. ಮಾನಸ ಸಂಸ್ಥೆಯ ನಿರ್ದೇಶಕಿ ಡಾ. ರಜನಿ ಎ ಪೈ, ಕುವೆಂಪು ವಿವಿ ಎನ್‌ಎಸ್‌ಎಸ್ ಅಧಿಕಾರಿ ಡಾ. ಶುಭಾ ಮರವಂತೆ, ಮಾನಸ ಸಂಸ್ಥೆಯ ನಿರ್ದೇಶಕ ಡಾ. ರಾಜೇಂದ್ರ ಚೆನ್ನಿ, ಕಟೀಲ್ ಅಶೋಕ್ ಪೈ ಸ್ಮಾರಕ ನರ್ಸಿಂಗ್ ಸಂಸ್ಥೆಯ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ್, ಐಕ್ಯುಎಸಿ ಸಂಯೋಜಕಿ ಡಾ. ಅರ್ಚನಾ ಭಟ್ ಉಪಸ್ಥಿತರಿದ್ದರು. ಬಳಿಕ ವಿವಿಧ ಮನೋರಂಜನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಚೆಂಡೆ ವಾದನ, ಜನಪದ ನೃತ್ಯಗಳ ಮೂಲಕ ಪ್ರತಿಭೆ ಅನಾವರಣಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net