

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಫೆ. 7ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಜಾರಿಯಾದ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಹಾಗೂ ಸಮಾಲೋಚನಾ ಸಭೆ ನಡೆಸಲಿದ್ದಾರೆ. ಜಿಲ್ಲಾಮಟ್ಟದ ಅಧಿಕಾರಿಗಳು ಪ್ರಗತಿ ಪರಿಶೀಲನಾ ಸಭೆಗೆ ಇಲಾಖೆ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಹಾಜರಾಗಲು ಪ್ರಕಟಣೆ ತಿಳಿಸಿದೆ.