ಸಮಾವೇಶ: ಸಚಿವರಿಂದ ವಿಡಿಯೋ ಕಾನ್ಫರೆನ್ಸ್

DC Meeting
Published on

ಚಿತ್ರದುರ್ಗ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮೇ 20ರಂದು ನಡೆಯಲಿರುವ ಸರ್ಕಾರದ 2 ವರ್ಷದ ಸಾಧನಾ ಸಮಾವೇಶ ಸಿದ್ಧತೆ ಸಂಬಂಧ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಅನೇಕ ಜಿಲ್ಲಾಧಿಕಾರಿಗಳೊಂದಿಗೆ ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದರು.

ಸಚಿವರ ವಿಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಟಿ.ವೆಂಕಟೇಶ್ ಮಾತನಾಡಿ, ಸಮಾವೇಶದಲ್ಲಿ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲೆಯ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಿ ಹಿಂದಿರುಗಲು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಎಸಿ ಮೆಹಬೂಬ್ ಜಿಲಾನಿ ಖುರೇಷಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ ಸೇರಿ ತಹಸೀಲ್ದಾರರು, ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net