ಸಮುದಾಯ ಭವನ, ದೇಗುಲ ಉದ್ಘಾಟನೆ ಇಂದು

Bhavana
Published on

ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ಹೊರಕೆರೆ ದೇವರಪುರದಲ್ಲಿ ನೂತನವಾಗಿ ನಿರ್ಮಿಸಿರುವ ಬನಶಂಕರಿ ಸಮುದಾಯ ಭವನ, ಮಹಾಗಣಪತಿ ದೇಗುಲ ಉದ್ಘಾಟನಾ ಕಾರ್ಯಕ್ರಮವನ್ನು ನ. 20ರಂದು ಬೆಳಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ.

ದಯಾನಂದಪುರಿ ಶ್ರೀ, ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ, ಶಾಂತವೀರ ಶ್ರೀ, ನಂಜಾವಧೂತ ಶ್ರೀ ಸಾನಿಧ್ಯ ವಹಿಸಲಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಶ್ರೀರಾಮ ಸೇವಾ ಟ್ರಸ್ಟ್ ಮನವಿ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net