ಸಮುದಾಯ ಭವನ ಸದ್ಬಳಕೆಯಾಗಲಿ

IMG-20221118-WA0145 - Copy
Published on


ಹಾಸನ : ಎಲ್ಲರಿಗೂ ಸಮಾನ ಹಕ್ಕು ನೀಡಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ ನಿರ್ಮಿಸಿರುವ ಸಮುದಾಯ ಭವನ ಒಳ್ಳೆಯ ಕಾರ್ಯಗಳಿಗೆ ಬಳಕೆಯಾಗಲಿ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಸಲಹೆ ನೀಡಿದರು.

ಆಲೂರು ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಎಲ್ಲ ಸಮುದಾಯಗಳಿಗೆ ಶಿಕ್ಷಣ, ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸಮಾನ ಅವಕಾಶ ಕಲ್ಪಿಸಿಕೊಟ್ಟ ಮಹಾನ್ ಚೇತನ ಅಂಬೇಡ್ಕರ್. ಅವರು ತೋರಿದ ಹಾದಿಯಲ್ಲಿ ಎಲ್ಲರೂ ನಡೆದು ನೆಮ್ಮದಿಯ ಸಮಾಜ ನಿರ್ಮಿಸೋಣ ಎಂದರು.


ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಸ್.ಮಂಜೇಗೌಡ ಮಾತನಾಡಿ, ಪಾಳ್ಯ ಗ್ರಾಮದಲ್ಲಿ ದಲಿತ ಸಮುದಾಯಕ್ಕಾಗಿ ಒಂದು ಭವನ ನಿರ್ಮಾಣ ಮಾಡಬೇಕೆಂಬ ಕೂಗು ಹಲವು ದಶಕಗಳಿಂದಲೂ ಇತ್ತು. ಭವವ ನಿರ್ಮಾಣ ಕಾರ್ಯ ಯಶಸ್ವಿಯಾಗಿರುವುದು ಸಂತೋಷದ ವಿಚಾರ ಎಂದರು.

ಪಾಳ್ಯ ಗ್ರಾಪಂ ಅಧ್ಯಕ್ಷ ಪ್ರಕಾಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಎಂ.ಡಿ.ಕಾಂತರಾಜ್, ಉಪ ಕಾರ್ಯದರ್ಶಿ ಚಂದ್ರಶೇಖರ್, ತಾಪಂ ಕಾರ್ಯ ನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ತಹಸೀಲ್ದಾರ್ ಕೆ.ಸಿ.ಸೌಮ್ಯಾ, ಜಿಪಂ ಮಾಜಿ ಸದಸ್ಯೆ ಚಂಚಲಾ ಕುಮಾರಸ್ವಾಮಿ, ತಾಪಂ ಮಾಜಿ ಸದಸ್ಯರಾದ ನಟರಾಜ್ ನಾಕಲಗೂಡು, ಸಿ.ವಿ.ಲಿಂಗರಾಜು, ಉಮೇಶ್, ಕೇತ್ರ ಶಿಕ್ಷಣಾಧಿಕಾರಿ ರುದ್ರೇಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶಾಂತರಾಜು, ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಬಸವರಾಜು ಗೇಕರವಳ್ಳಿ, ದಲಿತ ಮುಖಂಡರಾದ ಧರ್ಮಪ್ಪ, ಪರಮೇಶ್, ಹೊನ್ನಪ್ಪ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net