

ಕೊಟ್ಟೂರು: ಭಾಗಶಃ ನಿರ್ಮಾಣಗೊಂಡಿದ್ದ ಪಂಚಮಸಾಲಿ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಒಂದು ಕೋಟಿ ರೂ. ನೀಡುವುದಾಗಿ ಕಳೆದ ವರ್ಷ ಚಪ್ಪರದಹಳ್ಳಿ ಗ್ರಾಮದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ನೀಡಿದ್ದ ಭರವಸೆ ಈಡೇರಿಸಿರುವುದಾಗಿ ಶಾಸಕ ಕೆ.ನೇಮಿರಾಜ್ ನಾಯ್ಕ್ ಹೇಳಿದರು.
ಚಪ್ಪರದಹಳ್ಳಿ ಗ್ರಾಮದಲ್ಲಿ ಪಂಚಮಸಾಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಕೆಕೆಆರ್‌ಡಿಬಿಯ ಒಂದು ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಬುಧವಾರ ಮಾತನಾಡಿದರು. ಸಮುದಾಯ ಭವನದ ಕಾಮಗಾರಿ ಕಳಪೆ ಆಗುವುದಿಲ್ಲ ಎಂದು ಭರವಸೆ ನೀಡಿದರು.
ಜಿಪಂ ಮಾಜಿ ಸದಸ್ಯ ಎಂಎಂಜೆ ಹರ್ಷವರ್ಧನ್, ಪಂಚಮಸಾಲಿ ಸಮುದಾಯದ ಪ್ರಮುಖ ಕೊಟ್ರಪ್ಪ, ಶಿಕ್ಷಕ ಬಸವರಾಜ, ಗ್ರಾಪಂ ಅಧ್ಯಕ್ಷೆ ಹೇಮಾವತಿ ರೇಣುಕಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಬೂದಿ ಶಿವಕುಮಾರ, ಗ್ರಾಪಂ ಸದಸ್ಯ ಕೆ.ಕೊಟ್ರೇಶಪ್ಪ, ಪಪಂ ಸದಸ್ಯ ಬಾವಿಕಟ್ಟಿ ಶಿವಾನಂದ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ್, ದೂಪದಹಳ್ಳಿ ಕೊಟ್ರೇಶ ಇತರರಿದ್ದರು.
ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮಾಜ ವತಿಯಿಂದ ಆಯೋಜಿಸಿದ್ದ ಮೆರವಣಿಗೆಗೆ ಶಾಸಕ ಕೆ.ನೇಮಿರಾಜ್ ನಾಯ್ಕ್ ಚನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು