ಸಮುದಾಯಭವನ ಕಾಮಗಾರಿ ಪೂರ್ಣಗೊಳಿಸಿ

2808-Kpl-Ravi-6
ಕೊಪ್ಪಳ ವಾಲ್ಮೀಕಿ ಸಮುದಾಯ ಭವನಕ್ಕೆ ಸೋಮವಾರ ಪ್ರಸನ್ನಾನಂದಪುರಿ ಸ್ವಾಮೀಜಿ ಭೇಟಿ ನೀಡಿದರು. ವಾಲ್ಮೀಕಿ ಗುರುಪೀಠ ಟ್ರಸ್ಟ್ ಜಿಲ್ಲಾ ಧರ್ಮದರ್ಶಿ ರಾಮಣ್ಣ ಕಲ್ಲನವರ, ವಾಲ್ಮೀಕಿ ನಾಯಕ ಮಹಾಸಭಾದ ತಾಲೂಕು ಅಧ್ಯಕ್ಷ ಶರಣಪ್ಪ ನಾಯಕ, ಎಸ್ಟಿ ಒಳಮೀಸಲು ಆಂದೋಲನ ಸಮಿತಿ ರಾಜ್ಯ ಸಂಚಾಲಕ ಮಂಜುನಾಥ ಗೊಂಡಬಾಳ, ಮಾರುತಿ ಇದ್ದರು.
Published on

ಕೊಪ್ಪಳ: ನಗರದಲ್ಲಿ ನಿರ್ಮಿಸುತ್ತಿರುವ ವಾಲ್ಮೀಕಿ ಸಮುದಾಯ ಭವನ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಶಾಸಕರಿಗೆ ಒತ್ತಾಯಿಸಿದ್ದೇನೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.


ನಗರದ ವಾಲ್ಮೀಕಿ ಸಮುದಾಯ ಭವನಕ್ಕೆ ಸೋಮವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.


ನಗರದ ಹಳೆ ಜಿಲ್ಲಾಸ್ಪತ್ರೆಯ ಹಿಂಭಾಗದ ವಾಲ್ಮೀಕಿ ಸಮುದಾಯ ಭವನಕ್ಕೆ 54 ಕೋಟಿ ಬಿಡುಗಡೆಯಾಗಿದೆ. ಕಾಮಗಾರಿ ಅನುಷ್ಠಾನ ವಿಳಂಬವಾಗುತ್ತಿದೆ. ತುರ್ತಾಗಿ ಕೈಗೊಂಡು ಆದಷ್ಟು ಬೇಗನೆ ಮುಗಿಸಬೇಕಿದೆ. ನಗರದ ಹೊರವಲಯದಲ್ಲಿನ ವಾಲ್ಮೀಕಿ ಭವನ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಸಂಬಂಧಿಸಿದವರ ಗಮನಕ್ಕೆ ತಂದಿರುವೆ. ಇದರಿಂದ ಸಮುದಾಯ ಜನರಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲು, ಸಭೆ, ಸಮಾರಂಭ ನಡೆಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ವಾಲ್ಮೀಕಿ ಗುರುಪೀಠ ಟ್ರಸ್ಟ್ ಜಿಲ್ಲಾ ಧರ್ಮದರ್ಶಿ ರಾಮಣ್ಣ ಕಲ್ಲನವರ, ವಾಲ್ಮೀಕಿ ನಾಯಕ ಮಹಾಸಭಾದ ತಾಲೂಕು ಅಧ್ಯಕ್ಷ ಶರಣಪ್ಪ ನಾಯಕ, ಎಸ್ಟಿ ಒಳಮೀಸಲು ಆಂದೋಲನ ಸಮಿತಿ ರಾಜ್ಯ ಸಂಚಾಲಕ ಮಂಜುನಾಥ ಗೊಂಡಬಾಳ, ಮಾರುತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net