ಸಮ್ಮೇಳನದ ಯಶಸ್ವಿಗೆ ವಕೀಲರು ಕೈಜೋಡಿಸಿ: ಶಾಸಕ ರವಿಕುಮಾರ್ ಗಣಿಗ ಮನವಿ

Meeting with lawyers Mandya
Published on

ಮಂಡ್ಯ: ನಗರದ ಹೊರವಲಯದಲ್ಲಿ ಡಿ.20ರಿಂದ 22ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ವಿವಿಧ ಉಪಸಮಿತಿಗೆ 40 ಜನ ವಕೀಲರನ್ನು ಸದಸ್ಯರಾಗಿ ಮಾಡಲಾಗಿದೆ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ವಕೀಲರೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಯಶಸ್ವಿಗೆ ವಕೀಲರ ಪಾತ್ರ ಇರಬೇಕು. ವಿವಿಧ ಸಮಿತಿಗಳಿಗೆ ನೇಮಕೊಂಡಿರುವ ವಕೀಲರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಕೊಡಬೇಕು ಎಂದು ತಿಳಿಸಿದರು.

ಈಗಾಗಲೇ ನಾನು ವಸತಿ ಸಮಿತಿಯ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದು, ಹಲವಾರು ಸಭೆಗಳು ನಡೆದಿವೆ. ಮುಂದಿನ ಸಭೆಗಳಲ್ಲಿ ವಸತಿ ಸಮಿತಿಯ ಸದಸ್ಯರು ಭಾಗವಹಿಸಿ. ಇನ್ನು ಮಂಡ್ಯ ನಗರದಲ್ಲಿ ಕೋರ್ಟ್ ಕಟ್ಟಡ ಕಟ್ಟಲು ಎರಡು ಜಾಗ ಗುರುತಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು.

ವಕೀಲ ಟಿ.ಎಸ್.ಸತ್ಯಾನಂದ ಮಾತನಾಡಿ, 40 ಜನ ವಕೀಲರನ್ನು ಉಪ ಸಮಿತಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಲು ವಕೀಲರು ಭಾಗಿಯಾಗಬೇಕು. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಅವರಿಗೆ ವಕೀಲರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಹಿರಿಯ ವಕೀಲ ಬಸವಯ್ಯ, ವಕೀಲರ ಸಂಘದ ಅಧ್ಯಕ್ಷ ರಾಜೇಂದ್ರ, ಎಂ.ಜೆ.ಜೈನ್, ಅರುಣ್‌ಕುಮಾರ್, ಉಮಾ, ಮಹೇಶ್, ಜಯಲಕ್ಷ್ಮೀ, ಕೆಂಪೇಗೌಡ, ಶಿವಕುಮಾರ್, ಭಾಸ್ಕರ್, ರೂಪಾ, ಪೂರ್ಣಿಮಾ, ಕೃಷ್ಣಮೂರ್ತಿ, ನಾಗರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net