ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ವೈ.ಎಂ.ಯಾಕೊಳ್ಳಿ ಆಯ್ಕೆ

bkt-11-6
Published on

ಬಾಗಲಕೋಟೆ: ಬಾಗಲಕೋಟೆ ಜಿಲ್ಲಾ ೧೨ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ವೈ.ಎಂ.ಯಾಕೊಳ್ಳಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೆಯಾದ ಕೊಡುಗೆ ನೀಡಿರುವ ಡಾ.ವೈ.ಎಂ.ಯಾಕೊಳ್ಳಿ ಮೂಲತಃ ಬಾದಾಮಿ ತಾಲೂಕಿನ ನೀರಬೂದಿಹಾಳ ಗ್ರಾಮದವರು. ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪ್ರಾಧ್ಯಾಪಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಖಾಂಡ ವಾಗ್ಮೀಗಳಾಗಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ತಮ್ಮ ವಿದ್ವತ್ ಪೂರ್ಣ ಭಾಷಣಗಳಿಂದ ಜನಮನ್ನಣೆ ಗಳಿಸಿದ್ದಾರೆ. ಕಥೆ, ಕಾವ್ಯ, ಚುಟುಕ, ಹೈಕು, ನಾಟಕ, ವಿಮರ್ಶೆ, ಜಾನಪದ ಪ್ರಕಾರಗಳು ಸೇರಿದಂತೆ ಕನ್ನಡ ಸಾರಸ್ವತ ಲೋಕಕ್ಕೆ ೫೦ ಕ್ಕೂ ಹೆಚ್ಚು ಕೃತಿಗಳನ್ನು ನೀಡಿದ್ದಾರೆ.

ಇವರ ಸುದೀರ್ಘ ಸಾಹಿತ್ಯ ಸೇವೆಯನ್ನು ಪರಿಗಣಿಸಿ, ಬಾಗಲಕೋಟೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಬಾದಾಮಿ ಇವರ ಸಹಯೋಗದಲ್ಲಿ ಮಾ.೨೨, ೨೩ ರಂದು ಬಾದಾಮಿ ತಾಲೂಕಿನ ನೀರಬೂದಿಹಾಳದಲ್ಲಿ ನಡೆಯುವ ಬಾಗಲಕೋಟೆ ಜಿಲ್ಲಾ ೧೨ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಸಭೆಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಡಾ.ಚಂದ್ರಶೇಖರ ಕಾಳನ್ನವರ, ಕೋಶಾಧ್ಯಕ್ಷ ಡಾ.ಸಿ.ಎಂ.ಜೋಶಿ, ಸಂಘಟನಾ ಕಾರ್ಯದರ್ಶಿಗಳಾದ ಶಂಕರ ಹೂಲಿ, ಸಿ.ಎಸ್.ನಾಗನೂರ, ಬಾದಾಮಿ ತಾಲೂಕ ಕಸಾಪ ಅಧ್ಯಕ್ಷ ಬಿ.ಎಫ್.ಹೊರಕೇರಿ, ತಾಲೂಕ ಕಾರ್ಯುದರ್ಶಿ ಮಹಾಂತೇಶ ಇಳಗೇರಿ, ರಾಮು ಸಾರವಾಡ, ಪಿ.ಎಸ್.ನೀಲಗುಂದ ಕೆರೂರು ಹೊಬಳಿ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ ಮತ್ತು ಪದಾಽಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net