ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

23 vikram 8
Published on

ಧಾರವಾಡ: ತಾಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಸಾಹಿತಿ ಲೀಲಾ ಕಲಕೋಟಿ ಅವರಿಗೆ ಸೋಮವಾರ ಆಮಂತ್ರಣ ನೀಡಿ ಅಧಿಕೃತವಾಗಿ ಆಹ್ವಾನಿಸಲಾಯಿತು.
ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ಜ. 29ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ ನೇತೃತ್ವದಲ್ಲಿ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ ನೀಡಿ ಸಮ್ಮೇಳನಕ್ಕೆ ಆಹ್ವಾನಿಸಲಾಯಿತು.
ಲೀಲಾ ಕಲಕೋಟಿ ಮಾತನಾಡಿ, ಕಸಾಪ ಜಿಲ್ಲಾ ಘಟಕವು ನನ್ನಂತವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಿರುವುದು ಸಂತಸ ತಂದಿದೆ. ಡಾ.ಲಿಂಗರಾಜ ಅಂಗಡಿ ಅವರ ತಂಡ ಉತ್ತಮವಾಗಿ ಸಂಘಟನೆಯೊಂದಿಗೆ ಎಲ್ಲರನ್ನೂ ಒಗ್ಗೂಡಿಸಿ ಕಾರ್ಯ ನಡೆಸುತ್ತಲೇ ಎಲ್ಲ ಬರಹಗಾರರನ್ನು ಗುರುತಿಸಿ ಗೌರವಿಸುತ್ತಿದೆ ಎಂದರು.
ತಾಲೂಕು ಘಟಕದ ಅಧ್ಯಕ್ಷೆ ಡಾ. ಶರಣಮ್ಮ ಗೋರೆಬಾಳ, ಜಿಲ್ಲಾ ಪದಾಧಿಕಾರಿಗಳಾದ ಪ್ರೊ. ಕೆ.ಎಸ್. ಕೌಜಲಗಿ, ಡಾ. ಜಿನದತ್ತ ಹಡಗಲಿ, ತಾಲೂಕು ಪದಾಧಿಕಾರಿಗಳಾದ ಕಾರ್ಯದರ್ಶಿ ಮಹಾಂತೇಶ ನರೇಗಲ್, ಮಾರ್ತಾಂಡಪ್ಪ ಕತ್ತಿ, ಮೇಘಾ ಹುಕ್ಕೇರಿ, ಬಿ.ಜಿ ಬಾರ್ಕಿ, ಎಸ್.ಎಂ. ದಾನಪ್ಪಗೌಡರ, ಡಾ.ಎಸ್.ಎಸ್. ದೊಡಮನಿ, ಸರಸ್ವತಿ ಭೋಸಲೆ, ಶಾಂತವೀರ ಬೆಟಗೇರಿ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net