ಸರಕಾರದ ಅನುದಾನ ಸದ್ಬಳಕೆಯಾಗಲಿ

15ydg06
Published on

ಯಾದಗಿರಿ: ಗ್ರಾಮೀಣ ಭಾಗದಲ್ಲಿನ ಮಕ್ಕಳು ಹಾಗೂ ತಾಯಂದಿರಲ್ಲಿ ಕಾಡುತ್ತಿರುವ ಅಪೌಷ್ಟಿಕ ಸಮಸ್ಯೆ ನಿವಾರಣೆಗೆ ಸರಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ತಿಳಿಸಿದರು.

ಶುಕ್ರವಾರ ಮತಕ್ಷೇತ್ರದ ಚಾಮನಳ್ಳಿ ತಾಂಡಾದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನಿಮರ್ಿಸಿದ ನೂತನ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಮಾತನಾಡಿ, ಹಿಂದುಳಿದ ಕಲ್ಯಾಣ ಕನರ್ಾಟಕ ಭಾಗದ ಜಿಲ್ಲೆಗಳಲ್ಲಿನ ಮಕ್ಕಳಲ್ಲಿ ಅಪೌಷ್ಟಿಕ ಸಮಸ್ಯೆ ಹೆಚ್ಚಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ಸರಕಾರ ನಾನಾ ಯೋಜನೆ ಜಾರಿಗೆ ತಂದಿದೆ. ಅಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡಬೇಕು ಎಂದು ಸೂಚಿಸಿದರು.

ಹಳ್ಳಿಗಳಲ್ಲಿ ಶಾಲೆ, ಕಾಲೇಜು, ಅಂಗನವಾಡಿ ಕಟ್ಟಡಗಳಿಗೆ ಸರಕಾರದ ಅನುದಾನ ಬಿಡುಗಡೆಯಾದಾಗ, ಗ್ರಾಮಸ್ಥರು, ಪಂಚಾಯಿತಿಯವರು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಮತಕ್ಷೇತ್ರದ ಜನರ ಆರೋಗ್ಯ, ವಿದ್ಯಾಥರ್ಿಗಳ ಶೈಕ್ಷಣಿಕ ಜೀವನಕ್ಕೆ ಬೇಕಾಗುವ ಶಾಲಾ, ಕಾಲೇಜುಗಳಿಗೆ ವಿಶೇಷ ಅನುದಾನ ತರುವ ಪ್ರಯತ್ನ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.

ಇದೇ ವೇಳೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಹಿನ್ನೆಲೆಯಲ್ಲಿ ಅಕಾರಿಗಳು, ಗ್ರಾಪಂ ಅಧ್ಯಕ್ಷ, ಸದಸ್ಯರ ಜತೆಯಲ್ಲಿ ಸಂವಿಧಾನ ಪೀಠಿಕೆಯನ್ನು ಶಾಸಕರು ಓದಿದರು. ಅಂಗನವಾಡಿಯಲ್ಲಿ ಪುಟಾಣಿಯೊಬ್ಬಳ ಜನ್ಮದಿನದ ಅಂಗವಾಗಿ ಕೇಕ್ ಕತ್ತರಿಸಿ ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net