ಸರಕಾರದಿಂದ ಹೆಚ್ಚಿನ ಪರಿಹಾರಕ್ಕೆ ಕ್ರಮ

06ydg04
Published on


ಯಾದಗಿರಿ: ವಡಿಗೇರಾ ತಾಲೂಕಿನ ಶಿವಪುರ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಾಬಣ್ಣ ನವರ ಮನೆಗೆ ಸೋಮವಾರ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ವೈಯಕ್ತಿಕ ಧನ ಸಹಾಯ ಮಾಡಿದ ಶಾಸಕರು, ನನ್ನ ಕ್ಷೇತ್ರದಲ್ಲಿ ಈ ರೀತಿ ದುರ್ಘಟನೆ ನಡೆದಿರುವುದು ಮನಸ್ಸಿಗೆ ನೋವಾಗಿದೆ. ಸಾಬಣ್ಣ ಪತ್ನಿಗೆ ಅಂಗನವಾಡಿ ಕೇಂದ್ರದಲ್ಲಿ ಇಲ್ಲವೇ ಹೊರಗುತ್ತಿಗೆ ಆಧಾರದ ಮೇಲೆ ನೌಕರಿ ಒದಗಿಸಲು ಪ್ರಯತ್ನಿಸಲಾಗುವುದು, ಅಲ್ಲದೆ ಸಕರ್ಾರದಿಂದ ಆದಷ್ಟು ಶೀಘ್ರದಲ್ಲಿ ಹೆಚ್ಚಿನ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಅಪಘಾತಕ್ಕೆ ರಸ್ತೆ ಅಕ್ಕ ಪಕ್ಕದಲ್ಲಿ ಬೆಳೆದ ಜಾಲಿಗಿಡ ಕಾರಣ ಎಂದು ತಿಳಿದು ಬಂದಿದೆ. ಇಡೀ ಕ್ಷೇತ್ರದಾದ್ಯಂತ ಗ್ರಾಮೀಣ ಭಾಗದಲ್ಲಿನ ಜಂಗಲ್ ಕಟ್ಟಿಂಗ್ ಮಡಿಸಲು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಗ್ರಾಪಂ ಪಿಡಿಒಗಳಿಗೂ ಪ್ರತ್ಯೇಕ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net