

ಸರಗೂರು: ಪಟ್ಟಣದ ನಾಲ್ಕನೇ ವಾರ್ಡ್‌ನ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಮಂಗಳವಾರ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅಂಬೇಡ್ಕರ್ ಸಮುದಾಯ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಡಿ.ಸಣ್ಣಸ್ವಾಮಿ ಮಾತನಾಡಿ, 1949ರ ನವೆಂಬರ್ 26ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಆಚರಣೆ ಮಾಡುತ್ತಿದ್ದೇವೆ ಎಂದರು.
ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಮಾತನಾಡಿ, ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆ, ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು. ಭಾರತದ ಸಂವಿಧಾನಕ್ಕೆ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ ಎಂದು ಹೇಳಿದರು.
ಭೋಗಯ್ಯ, ಭೀಮಯ್ಯ, ಹನುಮಂತಯ್ಯ, ಪರಶಿವ, ಶಿವಮೂರ್ತಿ, ಪುಟ್ಟರಾಜು ,ಕಾರಯ್ಯ, ಗೋಪಾಲ,ಭೋಗಪ್ಪ, ಮಹೇಶ, ಬಣ್ಣಯ್ಯ, ದೊಡ್ಡಭೈರ ಹಾಜರಿದ್ದರು.