ಸರಣಿ ಅಪಘಾತ, ಇಬ್ಬರ ಸಾವು

25
Published on

ರಾಯಬಾಗ: ಬೈಕ್ ಮತ್ತು ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದು ಮಹಿಳೆ ಹಾಗೂ ಯುವಕ ಮೃತಪಟ್ಟ ಘಟನೆ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ. ಸ್ಕೂಟಿಯಲ್ಲಿ ತೆರಳುತ್ತಿದ್ದ ಪೂನಂ ಬೈರಾಂ ತಳವಾರೆ (25) ಹಾಗೂ ಬೈಕ್ ಸವಾರ ಬಾಳಪ್ಪ ಕುಮಾರ ಕಾಂಬಳೆ (22) ಮೃತಪಟ್ಟವರು.

ಇಬ್ಬರೂ ಬೊಮ್ಮನಾಳ ಗ್ರಾಮದ ನಿವಾಸಿಗಳಾಗಿದ್ದರು. ಹಾರೂಗೇರಿಯಿಂದ ಬೊಮ್ಮನಾಳ ಕಡೆಗೆ ಹೊರಟಿದ್ದ ಸ್ಕೂಟಿ ನಿಯಂತ್ರಣ ತಪ್ಪಿ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ. ತಲೆ ಮೇಲೆ ಚಕ್ರ ಹರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾರೆ.

ಅದೇ ರಸ್ತೆಯಲ್ಲಿ ಬರುತ್ತಿದ್ದ ಬೈಕ್‌ಗೂ ಟಿಪ್ಪರ್ ಡಿಕ್ಕಿಯಾಗಿದ್ದು, ಸವಾರ ಬಾಳಪ್ಪ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಸ್ಕೂಟಿ ಹಾಗೂ ಟಿಪ್ಪರ್‌ಗೆ ಬೆಂಕಿ ಹೊತ್ತಿಕೊಂಡಿತ್ತು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರು. ಟಿಪ್ಪರ್ ಚಾಲಕ ಪರಾರಿಯಾಗಿದ್ದು, ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net