ಸರಣಿ ಅಪಘಾತ, ಇಬ್ಬರು ಚಾಲಕರ ಸಾವು

25
Published on

ಬೆಳಗಾವಿ: ಸಮೀಪದ ರಾಷ್ಟ್ರೀಯ ಹೆದ್ದಾರಿ-4ರ ಸುತಗಟ್ಟಿ ಇಳಿಜಾರು ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್, ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿ, ಇಬ್ಬರು ಚಾಲಕರು ಸಾವಿಗೀಡಾದ ದುರ್ಘಟನೆ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ.

ಉತ್ತರ ಪ್ರದೇಶದ ನೀರಜ್ ಹಾಗೂ ಮಹಾರಾಷ್ಟ್ರದ ಬೀಡ ಜಿಲ್ಲೆಯ ರಾಜೇಂದ್ರ ದೋಹಿಪಡೆ ಮೃತಪಟ್ಟ ಚಾಲಕರು. ಶಿಗ್ಗಾವಿ ಕಡೆಯಿಂದ ಮಹಾರಾಷ್ಟ್ರಕ್ಕೆ ಮೆಕ್ಕೆಜೋಳದ ಹಿಟ್ಟು ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಕಂಟೇನರ್ ಮೂರು ಭಾಗವಾಗಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮತ್ತೆರಡು ವಾಹನಗಳಿಗೆ ಅಪ್ಪಳಿಸಿದ್ದು, ಉಳ್ಳಾಗಡ್ಡಿ ತುಂಬಿಕೊಂಡು ಕೇರಳಕ್ಕೆ ಹೊರಟಿದ್ದ ಲಾರಿ ಚಾಲಕ ರಾಜೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾಕತಿ ಠಾಣೆ ಪೊಲೀಸರು ಪರಿಶೀಲಿಸಿ, ಗಂಭೀರವಾಗಿ ಗಾಯಗೊಂಡಿದ್ದ ನೀರಜ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ಬೆಳಗ್ಗೆ ಮೃತಪಟ್ಟಿದ್ದಾನೆ. ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net