ಸರಣಿ ಅಪಘಾತದಲ್ಲಿ 3 ವಾಹನ ಜಖಂ

28 YLP 04
Published on

ಯಲ್ಲಾಪುರ: ಸರಣಿ ಅಪಘಾತದಲ್ಲಿ ಮೂರು ವಾಹನಗಳು ಜಖಂಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಶಿರಲೆ ಜಲಪಾತದ ಕ್ರಾಸ್ ಬಳಿ ಸೋಮವಾರ ಸಂಭವಿಸಿದೆ. ಯಲ್ಲಾಪುರದಿಂದ ಅಂಕೋಲಾ ಕಡೆಗೆ ಹೊರಟಿದ್ದ ಟ್ಯಾಂಕರ್ ಲಾರಿ ಅರಬೈಲ್ ಘಟ್ಟದ ಇಳಿಜಾರಿನಲ್ಲಿ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಮುಂದೆ ಹೋಗುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂರೂ ವಾಹನಗಳು ಜಖಂಗೊಂಡಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಟ್ಯಾಂಕರ್ ಚಾಲಕ ಬೆಳಗಾವಿಯ ರಾಚಯ್ಯ ದುಂಡಯ್ಯ ಹಿರೇಮಠ ಎಂಬುವರ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net