ಸರಳ ವಿವಾಹ ಪ್ರೋತ್ಸಾಹಿಸಲು ಸಮುದಾಯ ಭವನ ನಿರ್ಮಾಣ

oplus_0
oplus_0
Published on

ಪಾಂಡವಪುರ: ಬಡವರು ಮತ್ತು ಆರ್ಥಿಕವಾಗಿ ಹಿಂದುಳಿದವರ ಅನುಕೂಲಕ್ಕಾಗಿ ಹಾಗೂ ಸರಳ ವಿವಾಹ ಪ್ರೋತ್ಸಾಹಿಸಲು ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ತಾಲೂಕಿನ ಕೆನ್ನಾಳು ಗ್ರಾಮದ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಕೆಆರ್‌ಐಡಿಎಲ್ ವತಿಯಿಂದ 75 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಗ್ರಾಮದ ಜನ ಮದುವೆ ಸೇರಿದಂತೆ ಇತರ ಶುಭ ಕಾರ್ಯಗಳನ್ನು ಮಾಡಲು ಅನುಕೂಲವಾಗುವಂತೆ ಸಮುದಾಯ ಭವನ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಇದಕ್ಕೆ ಸರ್ಕಾರದಿಂದ 10 ಲಕ್ಷ ರೂ.ಗಳನ್ನು ಮೊದಲ ಕಂತಿನಲ್ಲಿ ಬಿಡುಗಡೆಯಾಗಿದ್ದು, ಉಳಿಕೆ ಮೊತ್ತವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು. ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಗ್ರಾಮದವರು ಇದರ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ರೈತಸಂಘ ತಾಲೂಕು ಅಧ್ಯಕ್ಷ ಕೆನ್ನಾಳು ವಿಜಯಕುಮಾರ್, ಮಾಜಿ ಅಧ್ಯಕ್ಷ ಪಿ.ನಾಗರಾಜು, ಕೆನ್ನಾಳು ಗ್ರಾಪಂ ಅಧ್ಯಕ್ಷ ವಿ.ಪ್ರಕಾಶ್, ಸದಸ್ಯರಾದ ಎ.ಬಿ.ಚಿದಂಬರ, ಕೆ.ಪಿ.ನಂದೀಶ್, ತಾಪಂ ಮಾಜಿ ಸದಸ್ಯ ಪದ್ದಣ್ಣ, ಮುಖಂಡ ಶಂಕರೇಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net