

ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜ, ಜಗದಜ್ಯೋತಿ ಬಸವೇಶ್ವರರ ಪುತ್ಥಳಿಗಳ ಪ್ರತಿಷ್ಠಾಪನೆ ಕಾರ್ಯಕ್ರಮ ಆ.೨೫ ರಂದು ನಡೆಯುವುದಿಲ್ಲ. ಕಾನೂನಾತ್ಮಕ ಸಮಸ್ಯೆ ಎದುರಾಗಿದೆ. ಹೀಗಾಗಿ ಮುಂದೂಡಲಾಗಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ಥಳಿ ಸ್ಥಾಪನೆಗೆ ಯಾರ ವಿರೋಧ ಇಲ್ಲವಾದರೂ ಕಾನೂನಾತ್ಮಕ ಸಮಸ್ಯೆ ಎದುರಾಗಿದ್ದು, ಶೀಘ್ರ ಇತ್ಯರ್ಥವಾಗುವ ಸಾಧ್ಯತೆ ಇದೆ. ಆ.೧೫ ರಂದು ಶಾಸಕರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸಂಸದರಿಗೆ ಆಮಂತ್ರಣ ನೀಡಲಾಗಿತ್ತು. ನಿಗದಿಯಂತೆ ಎಲ್ಲ ಸಿದ್ದತೆಗಳು ನಡೆದಿದ್ದವು. ಕೊನೆ ಹಂತದಲ್ಲಿ ಮುಂದೂಡಲಾಗಿದೆ. ಸ್ಥಾಪನೆಗೆ ಯಾರ ವಿರೋಧವಿಲ್ಲ ಎಂದರು.
ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಎಸ್ಪಿ ಅಮರನಾಥ ರೆಡ್ಡಿ ಈ ಕುರಿತು ಚರ್ಚೆ ನಡೆಸಿ, ಪುತ್ಥಳಿ ಸ್ಥಾಪಿಸುವ ಕುರಿತು ಪತ್ರ ಬರೆಲಾಗುವುದು. ಅಲ್ಲಿಂದ ಅನುಮತಿ ಬಂದ ಬಳಿಕ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗದಜ್ಯೋತಿ ಬಸವೇಶ್ವರರ ಪುತ್ಥಳಿ ಸ್ಥಾಪನೆಗೆ ಮುಹೂರ್ತ ನಿಗದಿ ಪಡಿಸಲಾಗುವುದು. ಶಾಸಕರು, ಸಚಿವರು, ಸಂಸದರು ಸರ್ಕಾರದ ಮೇಲೆ ಒತ್ತಡವನ್ನು ತಂದು ಪುತ್ಥಳಿಯನ್ನು ಸ್ಥಾಪಿಸಲು ಪರವಾನಿಗೆ ಕೊಡಿಸಬೇಕು ಎಂದು ಆಗ್ರಹಿಸಿದ ಅವರು, ಕಾನೂನಾತ್ಮಕ ಸಮಸ್ಯೆಯಿಂದ ಈ ಮಹತ್ವದ ಕಾರ್ಯಕ್ಕೆ ಹಿನ್ನೆಡೆಯಾಗಿದೆ ಎಂದು ತಿಳಿಸಿದರು.
ಮುಖಂಡರಾದ ಸಿ.ಎಸ್.ಪಾಟೀಲ, ಅಶೋಕ ಲಿಂಬಾವಳಿ, ಅಂಬಾಜಿ ಜೋಶಿ, ಗುಂಡುರಾವ ಶಿಂಧೆ, ರಾಜು ವಾಘ ಸೇರಿದಂತೆ ಮತ್ತಿತರರು ಇದ್ದರು.