ಸರ್ಕಾರ ಯೋಜನೆಗಳು ಜನರಿಗೆ ತಲುಪಿಸಿ

bkt-5-3
ಬಾಗಲಕೋಟೆ ಜಿ.ಪಂ ನೂತನ ಸಭಾಭವನದಲ್ಲಿ ಶನಿವಾರ ಜರುಗಿದ ಪ್ರಸಕ್ತ ಸಾಲಿನ ಎರಡನೇ ತ್ರÊೆಮಾಸಿಕ ದಿಶಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿದರು.
Published on

ಬಾಗಲಕೋಟೆ: ಸರ್ಕಾರದ ಯೋಜನೆಗಳು ಕಾರ್ಯಗತಗೊಳಿಸುವುದರ ಜೊತೆಗೆ ಅವುಗಳ ಲಾಭ ಜನರಿಗೆ ತಲುಪಿಸುವ ಕೆಲಸವಾಗಬೇಕು ಎಂದು ಸಂಸದ ಪಿ.ಸಿ.ಗದ್ದಿಗೌಡರ ಅಽಕಾರಿಗಳಿಗೆ ಸೂಚನೆ ನೀಡಿದರು.

ಜಿ.ಪಂ ನೂತನ ಸಭಾಭವನದಲ್ಲಿ ಶನಿವಾರ ಜರುಗಿದ ಪ್ರಸಕ್ತ ಸಾಲಿನ ಎರಡನೇ ತ್ರÊೆಮಾಸಿಕ ದಿಶಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಭಿವೃದ್ದಿ ಕಾರ್ಯ ಒಂದು ಕಡೆಯಾದರೆ ಜನ ಕಲ್ಯಾಣ ಕಾರ್ಯದಲ್ಲಿ ಸೌಲಭ್ಯಗಳು ಜನರಿಗೆ ತಲುಪಿಸುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಅಽಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಲು ಸೂಚಿಸಿದರು. ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೃಷಿ, ತೋಟಗಾರಿಕೆ, ನರೇಗಾ, ಸ್ವಚ್ಛಭಾರತ ಸೇರಿದಂತೆ ಇತರೆ ಇಲಾಖೆಗಳ ಪ್ರಗತಿ ಪರಿಶೀಲನೆ ಕೈಗೊಂಡರು.

ಜಿಲ್ಲೆಯ ಶೈಕ್ಷಣಿ ಪ್ರಗತಿಯಾಗಬೇಕಾದರೆ, ಪ್ರಾಥಮಿಕ ಹಂತದಲ್ಲಿಯೇ ಮಕ್ಕಳು ಸುಧಾರಣೆಯಾಗಬೇಕು ಅಂದಾಗ ಮಾತ್ರ ಮುಂದಿನ ಹಂತರದಲ್ಲಿ ಉತ್ತಮ ಫಲಿತಾಂಶ ಬರಲು ಸಾಧ್ಯವಾಗುತ್ತದೆ. ಶಾಲೆಗಳಲ್ಲಿ ಮೂಲಭೂತ ಸೌಲಭ್ಯಕ್ಕೆ ಹೆಚ್ಚು ಒತ್ತು ಕೊಟ್ಟು ನರೇಗಾದಡಿ ಕೈಗೊಳ್ಳಬಹುದಾದ ಶಾಲಾ ಕೌಂಪಂಡ್, ಶೌಚಗೃಹ ಸೇರಿದಂತೆ ಇತರೆ ಕಾಮಗಾರಿಗಳನ್ನು ಕೈಗೊಳ್ಳಲು ಸೂಚಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕೇಂದ್ರ ಪುರಷ್ಕೃತ ಯೋಜನೆಗಳು ಸರಿಯಾಗಿ ಕಾರ್ಯಗತಗೊಳಿಸಲು ತಿಳಿಸಿದ ಅವರು ಸುಕನ್ಯಾ ಸಮೃದ್ಧಿ ಯೋಜನೆಯ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ವಿ.ಪ ಸದಸ್ಯ ಪಿ.ಎಚ್.ಪೂಜಾರ ಮಾತನಾಡಿ, ಕೃಷಿ ಇಲಾಖೆಗೆ ಸಂಬಂಽಸಿದ ಕೇಂದ್ರ ಸರ್ಕಾರದ ಯೋಜನೆಗಳು ಸಾಕಷ್ಟಿದ್ದು, ಆ ಯೋಜನೆಗಳು ರೈತರುಗಳಿಗೆ ತಲುಪಬೇಕು. ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಮಾಡಿ ಯೋಜನೆಯ ಲಾಭ ಅರ್ಹ ಫಲಾನುಭಗಳು ಪಡೆಯುವಂತಾಗಬೇಕು. ಕೇವಲ ಕಾರ್ಯಕ್ರಮ ಮಾಡಿದರೆ ಸಾಲದು ರೈತರಿಗೆ ತಲುಪಿಸುವ ಕಾರ್ಯ ಮಾಡಿ. ಮಣ್ಣು ಪರೀಕ್ಷೆ ಕೈಗೊಂಡ ಮಣ್ಣಿನ ಫಲವತ್ತತೆಗೆ ತಕ್ಕಂತ ಬೆಳೆ ಬೆಳೆಯಲು ರೈತರಿಗೆ ಸಲಹೆ ನೀಡಿ ಉತ್ತಮ ಫಸಲು ಪಡೆದು ಆರ್ಥಿಕವಾಗಿ ಸಬಲರಾಗುವಂತೆ ಮಾಡಲು ತಿಳಿಸಿದರು. ತೋಟಗಾರಿಕೆ ಬೆಳೆಯಲ್ಲಿ ತಾಳೆ ಎಣ್ಣೆ ಅಭಿಯಾನ ಕೈಗೊಂಡು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲು ಪ್ರೋತ್ಸಾಹಿಸಲು ತಿಳಿಸಿದರು.

ನರೇಗಾ ಯೋಜನೆಯಡಿ ನಮ್ಮ ಹೊಲ ನಮ್ಮ ರಸ್ತೆಯಡಿ ರಸ್ತೆಗಳು ಹಾಳಾಗಿದ್ದು, ಅವುಗಳ ದುರಸ್ಥಿ ಕಾಮಗಾರಿಗಳನ್ನು ಕೈಗೊಳ್ಳಲು ತಿಳಿಸಿದ ಅವರು ಸ್ವಚ್ಛಭಾರತ ಯೋಜನೆಯಡಿ ಸ್ವಚ್ಚ ಗ್ರಾಮವನ್ನಾಗಿ ಮಾಡಬೇಕು. ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಜೆಜೆಎಂ ಯೋಜನೆಯಡಿ ಪ್ರತಿ ಮನೆಗೆ ನಲ್ಲಿ ಸಂಪರ್ಕ ಕಲ್ಪಿಸುವ ಕಾರ್ಯ ಸರಿಯಾಗಿ ಆಗಬೇಕು. ಇದಕ್ಕಾಗಿ ಸರ್ಕಾರ ಸಾಕಷ್ಟು ಹಣ ಖರ್ಚು ಮಾಡಿದ್ದು, ಕೆಲವೊಂದು ಕಡೆ ನೀರು ಬರುತ್ತಿಲ್ಲವೆಂದರೆ ಹೇಗೆ? ಅಂತ ಪ್ರಶ್ನಿಸಿದ ಅವರು ಸಮಸ್ಯೆ ಇರುವ ಕಡೆ ಭೇಟಿ ನೀಡಿ ಪರಿಶೀಲಿಸಿದ ಸರಿಪಡಿಸುವ ಕೆಲವಾಗಬೇಕು ಎಂದು ಹೇಳಿದರು.

ನಗರ ಪ್ರದೇಶಗಳಲ್ಲಿ ದಿನದ ೨೪ ಗಂಟೆಗಳ ಕಾಲ ನೀರು ಪೂರೈಸುವ ಯೋಜನೆ ಜಮಖಂಡಿ ಹೊರತುಪಡಿಸಿ ಉಳಿದ ಸ್ಥಳೀಯ ಸಂಸ್ಥೆಗಳಲ್ಲಿ ಟೆಂಡರ್ ಆಗಿದ್ದು, ಕೆಲಸವನ್ನು ವರ್ಷದಲ್ಲಿ ಪೂರ್ಣಗೊಳಿಸಬೇಕು. ವಿಶ್ವಕರ್ಮ ಯೋಜನೆಯಡಿ ತಾಲೂಕಾ ಹಾಗೂ ಗ್ರಾಮ ಮಟ್ಟದಲ್ಲಿ ಅರಿವು ಚಟುವಟಿಕೆಗಳನ್ನು ಕೈಗೊಳ್ಳಬೇಕು ಅಂದಾಗ ಮಾತ್ರ ಯೊಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸಾಧ್ಯವಾಗುತ್ತದೆ. ನೇಕಾರಿಗೆ ಕಸಬನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಲಾಖೆ ಅಽಕಾರಿಗಳು ಕೆಲಸ ಮಾಡಲು ಸೂಚಿಸಿದರು.

ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಸವಿತಾ ಲೆಂಕಣ್ಣವರ, ಜಿಲ್ಲಾಽಕಾರಿ ಜಾನಕಿ ಕೆ.ಎಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ, ಐಎಫ್‌ಎಸ್ ಅಽಕಾರಿ, ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಜಿ.ಪಂ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಮುಖ್ಯ ಯೋಜನಾಽಕಾರಿ ಪುನಿತ್, ಮುಖ್ಯ ಲೆಕ್ಕಾಽಕಾರಿ ಸಿದ್ದರಾಮೇಶ್ವರ ಉಕ್ಕಲಿ ಹಾಗೂ ಜಿಲ್ಲಾ ಮಟ್ಟದ ಅಽಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net