ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ

Published on

ಹುಬ್ಬಳ್ಳಿ: ಹನಿಟ್ರ್ಯಾಪ್ ವಿಷಯವನ್ನು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಚಿವ ದಿನೇಶ ಗುಂಡೂರಾವ್ ಹೇಳಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಗಂಭೀರ ವಿಷಯವಾಗಿದ್ದು, ಸಚಿವ ಕೆ.ಎನ್. ರಾಜಣ್ಣ ಅವರು ಈಗಾಗಲೇ ದೂರು ನೀಡಿದ್ದಾರೆ ಎಂದರು.

ಉದ್ದೇಶ ಪೂರ್ವಕವಾಗಿ ಬಿಜೆಪಿ ಶಾಸಕರು ಸದನ ಸದನದಲ್ಲಿ ಗದ್ದಲ ಮಾಡಿದ್ದಾರೆ. ಸ್ಪೀಕರ್ ಮೇಲೆ ಹಲ್ಲೆ ನಡೆಸಲು ಮುಂದಾಗಿ, ನಿಯಮ ಉಲ್ಲಂಘಿಸಿ ಸದನಕ್ಕೆ ಅಗೌರವ ತಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣ ಮಾಡಬಾರದು, ಬಜೆಟ್ ಮೇಲೆ ಚರ್ಚೆ ನಡೆಸಬಾರದು ಎಂದು ಗದ್ದಲ ಮಾಡಿದ್ದಾರೆ. ಸದನದಲ್ಲಿ ಅಸಭ್ಯವಾಗಿ ವರ್ತಿಸಿದ್ದ ಬಿಜೆಪಿ ಶಾಸಕರನ್ನು ಸ್ಪೀಕರ್ ಅಮಾನತು ಮಾಡಿರುವ ನಿರ್ಧಾರ ಸರಿಯಾಗಿದೆ ಎಂದು ಸಮರ್ಥಿಸಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net