ಸರ್ಕಾರದ ಅಭಿವೃದ್ಧಿ ಮಾಹಿತಿ ಜನರಿಗೆ ತಿಳಿಸುವುದು ಕರ್ತವ್ಯ

4Anand8
Published on

ಬೆಳಗಾವಿ: ಸರ್ಕಾರದ ಅಭಿವೃದ್ಧಿ ಕಾರ್ಯಗಳ ಮಾಹಿತಿ ನೀಡುವ ಅಗತ್ಯವಿದೆ. ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೆ ಸರ್ಕಾರದ ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ರಾಜ್ಯಾದ್ಯಂತ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಹಿತಿ ಪ್ರದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಪ್ರದರ್ಶನಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳು ಮತ್ತು ಇತರ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಸಾಕಷ್ಟು ಹಣ ಖರ್ಚು ಮಾಡಿದೆ. ಈ ಕುರಿತು ಜನರಿಗೆ ಮಾಹಿತಿ ನೀಡುವ ಅಗತ್ಯವಿದೆ.

ಪ್ರತಿ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಈ ಕೆಲಸ ಮಾಡಲಿದ್ದಾರೆ ಎಂದರು. ಶಾಸಕ ಆಸೀಫ್ ಸೇಠ್, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಹುದ್ದಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net