ಸರ್ಕಾರದ ಆದೇಶ ಬಂದ ನಂತರ ಕ್ರಮ

31ss1gramastaru cherche
ನಿಡ್ತ ಗ್ರಾಪಂ ಗ್ರಾಮಸಭೆಯಲ್ಲಿ ಪಾಲ್ಗೊಂಡ ಗ್ರಾಮಸ್ಥರಿಂದ ಚರ್ಚೆ
Published on

ಶನಿವಾರಸಂತೆ: ಸಮೀಪದ ನಿಡ್ತ ಗ್ರಾಮ ಪಂಚಾಯಿತಿಯ ಗ್ರಾಮಸಭೆಯು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶನಿವಾರ ಅಧ್ಯಕ್ಷೆ ಯಶೋದಾ ಪುಟ್ಟಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯಿತು.

ಶನಿವಾರಸಂತೆ ಸೆಸ್ಕ್ ಶಾಖಾಧಿಕಾರಿ ಸುದೀಪ್ ವಿದ್ಯುತ್ ವ್ಯವಸ್ಥೆಗೆ ಸಂಬಂಧಪಟ್ಟ ಮಾಹಿತಿ ನೀಡಲು ಮುಂದಾದರು. ಈ ವೇಳೆ ಗ್ರಾಮಸ್ಥರು ಕೃಷಿ ಉಪಯೋಗಕ್ಕಾಗಿ 10 ಎಚ್‌ಪಿ ಮೋಟರ್‌ಗೆ ಉಚಿತ ವಿದ್ಯುತ್ ಹಾಗೂ ಈ ಹಿಂದಿನ ಕೃಷಿ ವಿದ್ಯುತ್ ಬಿಲ್ ಮನ್ನಾ ಮಾಡುತ್ತೇವೆ ಎಂದು ಸರ್ಕಾರ ಆಶ್ವಾಸನೆ ನೀಡಿದೆ. ಈ ಬಗ್ಗೆ ನಮಗೆ ಮಾಹಿತಿ ನೀಡುವಂತೆ ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಶಾಖಾಧಿಕಾರಿ, ಸರ್ಕಾರ ಈಗ ರೈತರ 10 ಎಚ್‌ಪಿ ಮೋಟರ್‌ಗೆ ಉಚಿತ ವಿದ್ಯುತ್ ನೀಡುವುದು ಮತ್ತು ರೈತರಿಂದ ಬಾಕಿ ಬಿಲ್ ಮನ್ನಾ ಮಾಡುವ ನಿರ್ಧಾರ ತೆಗೆದುಕೊಂಡಿದೆ. ಆದರೆ ಸರ್ಕಾರದಿಂದ ಇಲಾಖೆಗೆ ಅಧಿಕೃತ ಆದೇಶ ಬಂದ ನಂತರ ಈ ಕುರಿತು ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಕೆರೆಗಳ ಒತ್ತುವರಿಯನ್ನು ಕಾನೂನಿನಂತೆ ತೆರವುಗೊಳಿಸಲಾಗುತ್ತದೆ. ಆದರೆ ಕೆಲವರು ಒತ್ತುವರಿ ಮಾಡಿಕೊಂಡ ಜಾಗದಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಆದರೆ ಇವುಗಳನ್ನು ತೆರವುಗೊಳಿಸಲು ಸ್ಥಳೀಯ ಅಧಿಕಾರಿಗಳಿಗೆ ತೊಡಕಾಗುತ್ತದೆ. ಹೀಗಾಗಿ ಹಿರಿಯ ಅಧಿಕಾರಿಗಳ ಮಟ್ಟದಲ್ಲಿ ಇಂತಹ ಪ್ರಕರಣಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಕಂದಾಯ ಇಲಾಖೆ ಅಧಿಕಾರಿ ಸಂತೋಷ್ ಮಾಹಿತಿ ನೀಡಿದರು.

ಗ್ರಾಪಂ ಉಪಾಧ್ಯಕ್ಷ ತೀರ್ಥಾನಂದ್, ಪಿಡಿಒ ಪ್ರತಿಮಾ, ಕಾರ್ಯದರ್ಶಿ ಕುಶಾಲಪ್ಪ, ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್‌ಕುಮಾರ್, ಪಶು ವೈದ್ಯಾಧಿಕಾರಿ ಡಾ.ಸತೀಶ್, ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net