ಸರ್ಕಾರದ ಕೆಲಸ ಮೆಚ್ಚಿ ಕಾಂಗ್ರೆಸ್‌ಗೆ ಸೇರ್ಪಡೆ

MDG mla
ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಸಮ್ಮುಖದಲ್ಲಿ ಗೋಣಿಬೀಡು ಗ್ರಾಪಂ ಬಿಜೆಪಿ ಬೆಂಬಲಿತ ಸದಸ್ಯ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಎ.ಜಿ.ಸುಬ್ರಾಯ ಗೌಡ, ಪ್ರಹ್ಲಾದ, ದೀಪಕ್, ರಾಧಾ ಮಿತ್ರೇಶ್, ಅಪ್ರೊಜ್ ಅಹಮದ್, ಮನು ಮರಬೈಲ್ ಇತರರಿದ್ದರು.
Published on

ಮೂಡಿಗೆರೆ: ಗೋಣಿಬೀಡು ಗ್ರಾಮ ಪಂಚಾಯಿತಿ ಬಿಜೆಪಿ ಬೆಂಬಲಿತ ಸದಸ್ಯ ವಿಜಯೇಂದ್ರ ಅವರು ಬಿಜೆಪಿ ತೊರೆದು ಶಾಸಕಿ ನಯನಾ ಮೋಟಮ್ಮ ಸಮ್ಮುಖದಲ್ಲಿ ಮಂಗಳವಾರ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಶಾಸಕಿ ನಯನಾ ಮೋಟಮ್ಮ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಪರ್ವ ಆರಂಭವಾಗಿದೆ. ಕಾಂಕ್ರೀಟ್ ರಸ್ತೆ ನಿರ್ಮಾಣ, ಹೆದ್ದಾರಿಗಳ ಅಭಿವೃದ್ಧಿ, ಸೇತುವೆ ನಿರ್ಮಾಣ, ಕುಡಿಯುವ ನೀರಿನ ಯೋಜನೆ, ಬಾಕ್ಸ್ ಚರಂಡಿ ನಿರ್ಮಾಣ, ವಿದ್ಯುತ್ ಸಮಸ್ಯೆಗೆ ಪರಿಹಾರ ಸೇರಿದಂತೆ ಎಲ್ಲದಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತಿ ಶಾಸಕರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ್ದಾರೆ ಎಂದರು.

ಶಾಲಾ ಕಟ್ಟಡ, ಅಂಗನವಾಡಿ, ಸಮುದಾಯ ಭವನ ಸೇರಿದಂತೆ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರದ ಹೆಚ್ಚಿನ ಆಸಕ್ತಿ ವಹಿಸಿದೆ. ಗ್ಯಾರಂಟಿ ಯೋಜನೆಯಿಂದ ಜನ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಎಲ್ಲರಿಗೂ ಉಚಿತ ವಿದ್ಯುತ್ ಪೂರೈಕೆಯಿಂದಾಗಿ ಜನ ನೆಮ್ಮದಿಯ ವಾತಾವರಣದಲ್ಲಿದ್ದಾರೆ. ಕಾಫಿ ಪಲ್ಪರ್ ಮತ್ತು ತೋಟಕ್ಕೆ ನೀರಾಯಿಸುವ ಸಮಯದಲ್ಲಿ ಸರ್ಕಾರ ಲೋಡ್ ಶೆಡ್ಡಿಂಗ್ ಮಾಡದೆ ರೈತರಪರ ನಿಂತಿದೆ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ ನಂತರ ಮಹಿಳೆಯರು ಹೆಚ್ಚಿನ ಸ್ವಾವಲಂಬಿಗಳಾಗಿದ್ದಾರೆ. ನಷ್ಟದಲ್ಲಿದ್ದ ಸಾರಿಗೆ ಸಂಸ್ಥೆ ಲಾಭದಲ್ಲಿದೆ. ಹೆಚ್ಚುವರಿ ಬಸ್‌ಗಳನ್ನು ಸರ್ಕಾರ ಖರೀದಿಸಿದೆ. ನಿರುದ್ಯೋಗಿಗಳಿಗೆ ಯುವನಿಧಿ ಹೆಚ್ಚಿನ ಭರವಸೆಯನ್ನು ಕಲ್ಪಿಸಿದೆ. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಲ್ಲಿ ನೆಮ್ಮದಿಯ ವಾತಾವರಣ ಉಂಟಾಗಿದೆ. ಅನ್ನಭಾಗ್ಯ ಯೋಜನೆಯಿಂದಾಗಿ ಬಡವರು ಹೊಟ್ಟೆ ತುಂಬ ಊಟ ಮಾಡಲು ಸಹಕಾರಿಯಾಗಿದೆ. ಈ ಎಲ್ಲ ಯೋಜನೆಯಿಂದ ಪ್ರೇರಿತರಾಗಿ ಪ್ರತಿದಿನ ವಿವಿಧ ಪಕ್ಷಗಳನ್ನು ತೊರೆದು ಮುಖಂಡರು ಮತ್ತು ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ತಿಳಿಸಿದರು.

ಗೋಣಿಬೀಡು ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಎ.ಜಿ.ಸುಬ್ರಾಯ ಗೌಡ, ಗೋಣಿಬೀಡು ಗ್ರಾಪಂ ಸದಸ್ಯರಾದ ಪ್ರಹ್ಲಾದ, ದೀಪಕ್, ರಾಧಾ ಮಿತ್ರೇಶ್, ಮುಖಂಡರಾದ ಅಪ್ರೋಜ್ ಅಹಮದ್, ಮನು ಮರಬೈಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net