ಸರ್ಕಾರದ ಗಮನಕ್ಕೆ ಸಾರಿಗೆ ನೌಕರರ ಬೇಡಿಕೆ

30M.D.R.1
Published on

ಮದ್ದೂರು: ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಮಂಡ್ಯ ಶಾಸಕ ಪಿ.ರವಿಕುಮಾರ್‌ಗೌಡ ಭರವಸೆ ನೀಡಿದರು.


ಪಟ್ಟಣದ ಜಯಲಕ್ಷ್ಮೀ ನಂಜಪ್ಪ ಕಲ್ಯಾಣ ಮಂಟಪದಲ್ಲಿ ಭಾನುವಾರ ಜಿ.ಎ.ಮಂಜುನಾಥ್ ಅಭಿಮಾನಿಗಳ ಬಳಗ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ (ಇಂಟೆಕ್) ಮಂಡ್ಯ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಸೇವಾ ನಿವೃತ್ತಿ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.


ಸಾರಿಗೆ ನೌಕರರ ಸಂಬಳ ಜಾಸ್ತಿ ಮಾಡುವುದು, ಬಿಪಿಎಲ್ ವ್ಯಾಪ್ತಿಗೆ ಸೇರಿಸುವುದು, ಪಿಂಚಣಿ ಹೆಚ್ಚಿಗೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ನಿಮ್ಮೊಂದಿಗೆ ನಾನು ಸದಾ ಇರುತ್ತೇನೆ ಎಂದು ಸಾರಿಗೆ ನೌಕರರಿಗೆ ಭರವಸೆ ವ್ಯಕ್ತಪಡಿಸಿದರು.
ಸಾರಿಗೆ ನೌಕರರು ರಾಜ್ಯದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವುದು ಸಂತಸ ತಂದಿದೆ. ಅದರಲ್ಲೂ ಇತ್ತೀಚೆಗೆ ರಾಜ್ಯ ಸರ್ಕಾರ ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿಗೆ ತಂದ ಮೇಲೆ ಸಾರಿಗೆ ನೌಕರರಿಗೆ ಹೆಚ್ಚಿನ ಒತ್ತಡವಿದ್ದರೂ ಅದನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿರುವುದು ಅತ್ಯಂತ ಖುಷಿಯ ವಿಚಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಮಂಡ್ಯ ವಿಭಾಗದ ಸಹಾಯಕ ಭದ್ರತಾ ಮತ್ತು ಜಾಗೃತ ಅಧಿಕಾರಿ ಡಿ.ಎ. ಮಂಜುನಾಥ್, ಸಾರಿಗೆ ನೌಕರರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ನನ್ನ ಸೇವಾವಧಿಯಲ್ಲಿ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಇಲಾಖೆಗೆ ಉತ್ತಮ ಹೆಸರು ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಾರಿಗೆ ನೌಕರರಾದ ಮಂಡ್ಯ ವಿಭಾಗದ ಸಹಾಯಕ ಭದ್ರತಾ ಮತ್ತು ಜಾಗೃತಾಧಿಕಾರಿ ಜಿ.ಎ.ಮಂಜುನಾಥ್, ಸಹಾಯಕ ಅಂಕಿ ಅಂಶ ಅಧಿಕಾರಿ ಕೆ.ಎಸ್.ಪ್ರಕಾಶ್, ಕುಶಲಕರ್ಮಿ ವಿಭಾಗದ ಡಾ.ಎಚ್.ಸಿ.ಚಂದ್ರಶೇಖರ್, ಸಂಚಾರ ನಿಯಂತ್ರಕ ಎಚ್.ಕೆ. ರಾಜು ಅವರನ್ನು ಶಾಸಕ ರವಿಕುಮಾರ್‌ಗೌಡ ಅಭಿನಂದಿಸಿದರು.


ಅಧ್ಯಕ್ಷತೆಯನ್ನು ಮಂಡ್ಯ ವಿಭಾಗದ ನಿಯಂತ್ರಣಾಧಿಕಾರಿ ಎಸ್.ಪಿ. ನಾಗರಾಜು ವಹಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀವೆಂಕಟ, ರಮಣಪ್ಪ, ಅಧಿಕಾರಿಗಳಾದ ನಿಂಗರಾಜು, ಕೃಷ್ಣಮೂರ್ತಿ, ಸುನಿತಾಬಸವರಾಜು, ಭವ್ಯ, ಸುಧೀರ್, ಪಟೇಲ್ ಕೃಷ್ಣಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net