ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ

28.npk-1
ಕುಂಜಿಲದ ಆಕ್ಸ್‌ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತುಗಳ ವಿರೋಧಿ ದಿನವನ್ನು ಆಚರಿಸಲಾಯಿತು. ಮಂಜುನಾಥ್, ಶಾಹಿದ್ ಅಲಿ, ಕವಿತಾ ಇತರರಿದ್ದರು.
Published on

ನಾಪೋಕ್ಲು: ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸರ್ಕಾರ ಹಲವು ನಿಯಮಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹೇಳಿದರು.

ಸಮೀಪದ ಕುಂಜಿಲದ ಆಕ್ಸ್‌ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾದಕ ವಸ್ತುಗಳ ಬಳಕೆಯಿಂದ ಅನೇಕ ದುಷ್ಪರಿಣಾಮಗಳು ಎದುರಾಗುತ್ತವೆ. ಸಂಚಾರ ನಿಯಮಗಳನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಅಂತರ್ಜಾಲ ವಂಚಕರಿದ್ದು, ಅನಗತ್ಯವಾಗಿ ನಿಮ್ಮ ಮೊಬೈಲ್‌ಗಳಿಗೆ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ತಿಳಿಸಿದರು.

ಆಕ್ಸ್‌ಫರ್ಡ್ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯನಿರ್ವಾಹಕ ಅಧಿಕಾರಿ ಶಾಹಿದ್ ಅಲಿ, ಮುಖ್ಯಶಿಕ್ಷಕಿ ಕವಿತಾ, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net