

ಚಿಕ್ಕೋಡಿ: ರಾಜ್ಯದಲ್ಲಿ ಹಾಲು, ಪೆಟ್ರೋಲ್, ಕರೆಂಟ್ ಹಾಗೂ ಡೀಸೆಲ್ ದರ ಏರಿಕೆ ವಿರುದ್ಧ ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ, ಸದಲಗಾ ಮಂಡಲದ ಪದಾಧಿಕಾರಿಗಳು ಬೃಹತ್ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಯುಗಾದಿ ಹೊತ್ತಲ್ಲೇ ರಾಜ್ಯದ ಜನತೆಗೆ ಹಾಲು, ವಿದ್ಯುತ್ ದರ ಏರಿಕೆಯ ಆಘಾತ ನೀಡಿದ್ದು, ಸರ್ಕಾರ ಇದೀಗ ಗಾಯದ ಮೇಲೆ ಬರೆ ಎಂಬಂತೆ ಡೀಸೆಲ್ ಬೆಲೆ ಹೆಚ್ಚಿಸುವ ನಿರ್ಧಾರ ಕೈಗೊಂಡಿದ್ದು ಸಾಮಾನ್ಯ ಜನರ ಬದುಕಿಗೆ ಬರೆ ಎಳೆಯುತ್ತಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಅವೈಜ್ಞಾನಿಕ ಆರ್ಥಿಕ ನೀತಿಯಿಂದಾಗಿ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಕೂಡಲೇ ಬೆಲೆ ಏರಿಕೆ ಇಳಿಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.
ಬಿಜೆಪಿ ಚಿಕ್ಕೋಡಿ ಜಿಲ್ಲೆಯ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶಾಂಭವಿ ಅಶ್ವತ್ಥಪೂರ, ಪವನಕುಮಾರ ಮಹಾಜನ ಮಂಡಲ ಅಧ್ಯಕ್ಷರು ಚಿಕ್ಕೋಡಿ-ಸದಲಗಾ, ಸಂಜೀವ ಪಾಟೀಲ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ, ಅಪ್ಪಾಸಾಹೇಬ ಚೌಗಲಾ ಇತರರು ಇದ್ದರು.