ಸರ್ಕಾರದ ಯೋಜನೆ ಜನರಿಗೆ ತಲುಪಿಸಿ

Drama
Published on

ಚಿತ್ರದುರ್ಗ: ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಮನೋರಂಜನೆ ಜೊತೆಗೆ ಜನರಿಗೆ ತಲುಪಿಸಲು ಕಲಾತಂಡಗಳು ಮುಂದಾಗಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಸಲಹೆ ನೀಡಿದರು.

ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಾಹಿತಿ ಶಿಕ್ಷಣ, ಸಾಮಾಜಿಕ ವರ್ತನೆ ಬದಲಾವಣೆ ಸಂವಹನ ಕಾರ್ಯಕ್ರಮದಡಿ ಜಾನಪದ ಕಲಾತಂಡಗಳ ಆಯ್ಕೆ ಪ್ರಕ್ರಿಯೆಯಲ್ಲಿ ಮಾತನಾಡಿದರು.

ಬೀದಿ ನಾಟಕಗಳ ಮೂಲಕ ಕಲಾತಂಡಗಳು ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಲ್ಲಿನ ಯೋಜನೆಗಳ ಕುರಿತು ಅರಿವು ಮೂಡಿಸುವಲ್ಲಿ ನೈಪುಣ್ಯತೆ ಸಾಧಿಸಬೇಕಿದೆ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಕುಟುಂಬ ಯೋಜನೆಗಳ ಅನುಷ್ಠಾನಾಧಿಕಾರಿ ಡಾ. ರೇಣುಪ್ರಸಾದ್ ಮಾತನಾಡಿ, ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಪುರುಷರ ಭಾಗವಹಿಸುವಿಕೆ ಬಹಳ ಕಡಿಮೆ ಇದೆ. ಬಾಲ್ಯ ವಿವಾಹಗಳು ಹೆಚ್ಚಾಗಿ ನಡೆಯುತ್ತಲಿವೆ. ತಾಯಿ-ಶಿಶು ಮರಣ ತಗ್ಗಿಸಲು ಸ್ಥಳೀಯ ಭಾಷೆ ಮೂಲಕ ಜಾಗೃತಿ ಮೂಡಿಸಿ ಎಂದು ಸಲಹೆ ನೀಡಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅಭಿನವ, ಇಲಾಖೆ ಅಧಿಕಾರಿಗಳಾದ ಕೃಷ್ಣನಾಯ್ಕ್, ಎನ್.ಎಸ್.ಮಂಜುನಾಥ್, ಜೆ.ಆರ್.ಗೌರಮ್ಮ, ಎಂ.ಬಿ.ಹನುಮಂತಪ್ಪ, ಬಿ.ಮೂಗಪ್ಪ, ಜಾನಕಿ, ಆಂಜನೇಯ, ಗಣಕಯಂತ್ರ ನಿರ್ವಾಹಕ ಜಬ್ಬರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net