

ಗೋಣಿಕೊಪ್ಪ: ಬಿಜೆಪಿ ವಿರಾಜಪೇಟೆ ಮಂಡಲ ಕಾರ್ಯಕಾರಿಣಿ ಸಭೆ ಆರ್‌ಎಂಸಿ ಸಭಾಂಗಣದಲ್ಲಿ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಅಧ್ಯಕ್ಷತೆಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಪಕ್ಷದ ಜಿಲ್ಲಾ ಸಮಿತಿ, ತಾಲೂಕು ಸಮಿತಿ ಸದಸ್ಯರು, ವಿವಿಧ ಮೋರ್ಚಾದ ಅಧ್ಯಕ್ಷರು, ಪಧಾದಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು. ಮುಂದಿನ ಚುನಾವಣೆಯನ್ನು ಎದುರಿಸಲು ಕೈಗೊಳ್ಳಬಹುದಾದ ಪೂರ್ವ ಕಾರ್ಯಕ್ರಮ ಗಳ ಬಗ್ಗೆ ಚರ್ಚಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಕೊಡಗು ಪುಟ್ಟ ಜಿಲ್ಲೆಯಾದರೂ ದೊಡ್ಡ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಹೋರಾಟ ನಡೆಸುತ್ತಿವೆ. ಜನರಿಗೆ ಸರ್ಕಾರ ತಂದಿರುವ ಯೋಜನೆಗಳನ್ನು ತಿಳಿಸುವ ಕಾರ್ಯ ನಡೆಸಬೇಕಿದೆ. ಈ ಬಗ್ಗೆ ಎಲ್ಲರೂ ಒಗ್ಗೂಡಿ ಾರ್ಯನಿರ್ವಹಿಸಬೇಕಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ವಿಭಾಗ ಪ್ರಭಾರಿ ಪ್ರಸಾದ್ ಕುಮಾರ್, ಉದಯ್ ಕುಮಾರ್ ಶೆಟ್ಟಿ, ಹಾಸನ ಜಿಲ್ಲಾ ಪ್ರಭಾರಿ ರೀನಾ ಪ್ರಕಾಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ ಇದ್ದರು.