ಸರ್ಕಾರದ ಸವಲತ್ತು ಸದುಪಯೋಗಪಡಿಸಿಕೊಳ್ಳಿ

16 VTP 1 E Sharama Card
Published on

ವಿರಾಜಪೇಟೆ: ಅಸಂಘಟಿತ ಕಾರ್ಮಿಕ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ ಹಾಗೂ ಆಯುಷ್ಮಾನ್ ಕಾರ್ಡ್‌ಗಳನ್ನು ವಿರಾಜಪೇಟೆ ತಹಸೀಲ್ದಾರ್ ಅರ್ಚನಾ ಭಟ್ ವಿತರಿಸಿದರು.


ಪಟ್ಟಣದ ಪುರಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಾರ್ಮಿಕ ಘಟಕದ ದತ್ತಾಂಶ ಸಂಗ್ರಹಣ ನೋಂದಾಯಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಿಸಿ ಮಾತನಾಡಿ, ಕಾರ್ಮಿಕ ಘಟಕ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಹಾಗೂ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಮಿಸುತ್ತಾ ಬಂದಿದೆ. ಸರ್ಕಾರ ನೀಡುವ ಸವಲತ್ತುಗಳನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.


ಇದೇ ಸಂದರ್ಭ ಕೊಡಗು ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಗೋವಿಂದರಾಜ್ ದಾಸ್, ವೀಣಾ, ಆಧಂ, ನಾಗೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net