ಸರ್ಕಾರದ ಸವಲತ್ತುಗಳನ್ನು ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು: ಕೆ.ಎಸ್.ಲಿಂಗೇಶ್

ಸರ್ಕಾರದ ಸವಲತ್ತುಗಳನ್ನು ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು: ಕೆ.ಎಸ್.ಲಿಂಗೇಶ್
Published on

ಅರಸೀಕೆರೆ: ಸರ್ಕಾರದ ಸವಲತ್ತುಗಳನ್ನು ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು.

ತಾಲೂಕಿನ ಜಾವಗಲ್ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಗ್ರಾಮ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಗ್ರಾಮೀಣ ಜನರ ಆರ್ಥಿಕ ಪ್ರಗತಿ ಮನಗಂಡು ಕೃಷಿ ಹಾಗೂ ತೋಟಗಾರಿಕೆ ಸೇರಿ ವಿವಿಧ ಇಲಾಖೆಗಳ ಮೂಲಕ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಆದರೆ ಅವುಗಳು ಸಕಾಲಕ್ಕೆ ಫಲಾನುಭವಿಗಳನ್ನು ತಲುಪುವಂತೆ ಮಾಡುವ ಹೊಣೆಗಾರಿಕೆ ಅಧಿಕಾರಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳ ಮೇಲಿದೆ ಎಂದರು.

ಗ್ರಾಮಸಭೆಯಲ್ಲಿ ಪಾಲ್ಗೊಂಡಿದ್ದ ಹಲವರು ಸೆಸ್ಕ್ ಅಧಿಕಾರಿಗಳ ಕರ್ತವ್ಯ ಲೋಪದ ಬಗೆಗೆ ದೂರುಗಳ ಸುರಿಮಳೆ ಸುರಿಸಿದರು. ತಕ್ಷಣವೇ ಮಧ್ಯೆಪ್ರವೇಶಿಸಿದ ಕೆ.ಎಸ್.ಲಿಂಗೇಶ್ ಸುಟ್ಟುಹೋಗಿರುವ ವಿದ್ಯುತ್ ಪರಿವರ್ತಕಗಳನ್ನು ಬದಲಿಸುವ ಜತೆಗೆ ರೈತರು ಹಾಗೂ ಗ್ರಾಹಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಗ್ರಾಪಂ ಅಧ್ಯಕ್ಷೆ ಯಶೋಧಮ್ಮ,ಎಇ ಪ್ರಕಾಶ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಮಂಜುನಾಥ್,ಪಿಡಿಒ ರವಿ,ಆರ್‌ಐ ಮಂಜುನಾಥ್, ಕಾರ್ಯದರ್ಶಿ ನಂದಿನಿ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net