ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ

30 klr 08
ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದ ಕಲ್ಯಾಣ ಮಂಟಪದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾಂಭ ಮುನಿರಾಜು ಚಾಲನೆ ನೀಡಿದರು, ಪಿಡಿಓ ಕೆ.ಸಿ.ಶಾಲಿನಿ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಗೋಪಾಲಕೃಷ್ಣ ಇದ್ದರು.
Published on

ಕೋಲಾರ: ಸರ್ಕಾರ ಮಹಿಳೆಯರಿಗಾಗಿ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿ, ತಿಂಗಳಿಗೆ ಸಿಗುವ ೨ ಸಾವಿರ ರೂಗಳನ್ನು ಸದುಪಯೋಗ ಮಾಡಿಕೊಳ್ಳಿ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾಂಭ ಮುನಿರಾಜು ತಿಳಿಸಿದರು.

ಗ್ರಾಮದ ಸೋಮನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಗ್ರಾಮ ಪಂಚಾಯಿತಿಯಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ರಾಜ್ಯ ಸರ್ಕಾರ ರಾಜ್ಯವ್ಯಾಪಿಯಾಗಿ ಇಂದು ಯೋಜನೆ ಜಾರಿಗೊಳಿಸುತ್ತಿರುವುದರಿಂದ ಮಹಿಳೆಯಲ್ಲಿ ಸಂತಸ ಮೂಡಿದೆ ಎಂದರು.

ಗ್ರಾಮ ಪಂಚಾಯತಿ ಉಪಾಧ್ಯಕ್ಷ ನಾಗೇಂದ್ರ ಮಾತನಾಡಿ, ಸರ್ಕಾರ ಮಹಿಳೆಯರಿಗೆ ವಿವಿಧ ಯೋಜನೆಗಳ ಮೂಲಕ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ, ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವ ಮೂಲಕ ಆರ್ಥಿಕವಾಗಿಯೂ ಸಬಲರಾಗಬೇಕು ಎಂದರು.

ಗ್ರಾ.ಪಂ ಪಿಡಿಒ ಕೆ.ಸಿ.ಶಾಲಿನಿ ಮಾತನಾಡಿ, ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳುವ ಕುರಿತು ಮಾಹಿತಿ ನೀಡಿದ ಅವರು, ಮಹಿಳೆಯರ ನೋಂದಣಿಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸಹಕಾರ ನೀಡಬೇಕು, ಪ್ರತಿ ಮಹಿಳೆಗೂ ಸರ್ಕಾರದ ಸೌಲಭ್ಯ ಸಿಗುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಗ್ರಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಗೋಪಾಲಕೃಷ್ಣ, ಗ್ರಾ.ಪಂ ಸದಸ್ಯರಾದ ನಂಜುಂಡೇಗೌಡ, ಚಿಕ್ಕಚೆನ್ನಪ್ಪ, ನಾರಾಯಣಪ್ಪ, ಗ್ರಾ.ಪಂ ಮಾಜಿ ಸದಸ್ಯ ಎ.ಶ್ರೀಧರ್, ಗ್ರಾಮ ಪಂಚಾಯಿತಿ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ರತ್ನಮ್ಮ, ಖಜಾಂಚಿ ಗಾಯತ್ರಿ, ಗ್ರಾ.ಪಂ ಕಾರ್ಯದರ್ಶಿ ಪ್ರಮೀಳಾ, ಅಂಗನವಾಡಿ ಕಾರ್ಯಕರ್ತೆಯರಾದ ಅರುಣಮ್ಮ ಸೇರಿದಂತೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮದ ಹಿರಿಯರು, ಫಲಾನುಭವಿ ಮಹಿಳೆಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net