ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಧರ್ಮಗುರು ಸ್ಟೀಫನ್ ಮ್ಯಾಕ್ಸಿ ಅಲ್ಬುಕರ್ಕ್

TTH WEBBB
Published on

ತೀರ್ಥಹಳ್ಳಿ: ಸರ್ಕಾರ ಮತ್ತು ಸಮಾಜದಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನೀಡುವ ಸೌಲಭ್ಯವನ್ನು ಸದ್ಬಳಕೆ ಪಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಸುಜ್ಞಾನಿಗಳಾಗಿ ಬೆಳಗಬೇಕು ಎಂದು ಪಟ್ಟಣದ ಲೂರ್ದುಮಾತೆ ದೇವಾಲಯದ ಧರ್ಮಗುರು ಸ್ಟೀಫನ್ ಮ್ಯಾಕ್ಸಿ ಅಲ್ಬುಕರ್ಕ್ ಹೇಳಿದರು.

ಕ್ಯಾಥೊಲಿಕ್ ಅಸೋಸಿಯೇಶನ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮತ್ತು ಜಿಲ್ಲಾ ಕಾರ್ಮಿಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರೀತಿ ಮಾತನಾಡಿ, ಇಲಾಖೆಯಿಂದ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದರೂ ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕುಗಳಲ್ಲಿ ಅತೀ ಕಡಿಮೆ ಫಲಾನುಭವಿಗಳು ಇದನ್ನು ಪಡೆಯುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ 13 ವಿದ್ಯಾರ್ಥಿ ವಸತಿನಿಲಯಗಳಿದ್ದು, ಆಧುನಿಕ ಸೌಲಭ್ಯಗಳೊಂದಿಗೆ ಶಿಕ್ಷಣ ಪಡೆಯಬಹುದಾಗಿದೆ. ಈ ಆರ್ಥಿಕ ಸಾಲಿನಲ್ಲಿ 13 ಸಾವಿರ ಅರ್ಜಿಗಳು ಬಂದಿರುವುದಾಗಿ ತಿಳಿಸಿದರು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಅಜ್ಮತ್ ಉಲ್ಲಾ, ನಿಗಮದ ವತಿಯಿಂದ ಫಲಾನುಭವಿಗಳಿಗೆ ದೊರೆಯುವ ಸವಲತ್ತುಗಳ ಬಗ್ಗೆ ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net